ಬದಿಯಡ್ಕ : ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ದ್ವಿತೀಯ ಚಾತುರ್ಮಾಸ್ಯ ವ್ರತಾಚರಣೆ ಜುಲೈ 13 ರಿಂದ ಸೆ .10 ರ ವರೆಗೆ ಎಡನೀರು ಶ್ರೀಮಠದಲ್ಲಿ ನಡೆಯಲಿದೆ.
Advertisement
ಕಾರ್ಯಕ್ರಮಗಳ ಪೂರ್ವಭಾವಿಯಾಗಿ ಸಮಾಲೋಚನೆ ಹಾಗೂ ಸೆ .14 ರಂದು ನಡೆಯಲಿರುವ ಬ್ರಹ್ಮೈಕ್ಯ ಶ್ರೀಕೇಶವಾನಂದ ಭಾರತೀ ಶ್ರೀಗಳ ಆರಾಧನಾ ಮಹೋತ್ಸವದ ಕುರಿತಾಗಿ ಚರ್ಚಿಸಲು ಜೂ .19 ರಂದು ಭಾನುವಾರ ಬೆಳಿಗ್ಗೆ 11 ರಿಂದ ಎಡನೀರು ಮಠದ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಪಾಲ್ಗೊಳ್ಳಬೇಕೆಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.