ಮಲಪ್ಪುರಂ : ಕೇರಳದ ಎಡಪ್ಪಲ್‌ನ ಜನನಿಬಿಡ ಜಂಕ್ಷನ್‌ನಲ್ಲಿ ಅಕ್ಟೋಬರ್ 25 ರಂದು ರಾತ್ರಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಜನರಲ್ಲಿ ಭೀತಿ ಮೂಡುವಂತೆ ಮಾಡಿತು.ಆದರೆ, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಈ ಕುರಿತು ಸಮಗ್ರ ತನಿಖೆ ನಡೆಸಲಾಗಿದ್ದು, ಎಡಪ್ಪಲ್ ವೃತ್ತದ ಬಳಿ ಸ್ಫೋಟಕಗಳನ್ನು ಎಸೆದ ದುಷ್ಕರ್ಮಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ.ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನದಳವನ್ನು ಕರೆಸಿಕೊಳ್ಳಲಾಗಿದೆ.
ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಇಬ್ಬರು ಬೈಕ್‌ನಲ್ಲಿ ಬಂದು ರಾತ್ರಿ 7.15 ಕ್ಕೆ ವೃತ್ತದ ಬಳಿ ಸ್ಫೋಟಕಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.
“ನಾವು ಸಿಸಿವಿಟಿವಿ ದೃಶ್ಯಗಳನ್ನು ಆಧರಿಸಿ ವ್ಯಕ್ತಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಬೈಕ್ ನ ನೋಂದಣಿ ಸಂಖ್ಯೆ ಸ್ಪಷ್ಟವಾಗಿಲ್ಲ. ನಮ್ಮ ಊಹೆಯ ಪ್ರಕಾರ, ಅವರು ಕೆಲವು ಪಟಾಕಿಗಳನ್ನು ಎಸೆದರು. ನಾವು ಸ್ಥಳೀಯ ಅಂಗಡಿಯನ್ನು ಗುರುತಿಸಿದ್ದೇವೆ, ಅಲ್ಲಿಂದ ಅವರು ಪಟಾಕಿಗಳನ್ನು ಖರೀದಿಸಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.
ಹೆಚ್ಚಿನ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ಹೇಳಿದರು.