Advertisement

Eden Garden ಡ್ರೆಸ್ಸಿಂಗ್ ರೂಮ್‌ನಲ್ಲಿ ಅಗ್ನಿ ಅವಘಡ: ವಿಶ್ವಕಪ್ ತಯಾರಿಯಲ್ಲಿದ್ದ ಕ್ರೀಡಾಂಗಣ

09:55 AM Aug 10, 2023 | Team Udayavani |

ಕೋಲ್ಕತ್ತಾ: ಗಾಲೆ ಕ್ರಿಕೆಟ್ ಸಂಸ್ಥೆಯ ಅಧೀನದಲ್ಲಿರುವ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ.

Advertisement

ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪ್ರಕಾರ ಬುಧವಾರ ತಡರಾತ್ರಿ ಕ್ರೀಡಾಂಗಣದ ಡ್ರೆಸ್ಸಿಂಗ್ ರೂಂನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಆದಾಗ್ಯೂ ಡ್ರೆಸ್ಸಿಂಗ್ ರೂಂನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ನವೀಕರಣ ಕಾರ್ಯ ನಡೆಯುತಿತ್ತು:
ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ವಿಶ್ವ ಕಪ್ ಪಂದ್ಯಾಟಕ್ಕೆ ಸಜ್ಜುಗೊಳ್ಳಬೇಕಾಗಿದ್ದ ಕ್ರೀಡಾಂಗಣದ ನವೀಕರಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದೆ ಈ ನಡುವೆ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವನೀಯ ಅವಘಡ ತಪ್ಪಿದ್ದು ಆದರೂ ಡ್ರೆಸ್ಸಿಂಗ್ ರೂಮ್ ನಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ ಎನ್ನಲಾಗಿದೆ.

ಸುಟ್ಟು ಕರಕಲಾದ ವಸ್ತುಗಳು :
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಧ್ಯರಾತ್ರಿ 12 ರ ಸುಮಾರಿಗೆ ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಕರೆ ಬಂದಿತು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಒಂದು ಗಂಟೆ ಶ್ರಮವಹಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೆಂಕಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದು ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಘಡದಲ್ಲಿ ಡ್ರೆಸ್ಸಿಂಗ್ ರೂಮಿನ ಫಾಲ್ಸ್ ಸೀಲಿಂಗ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರೊಂದಿಗೆ ಅಲ್ಲಿ ಇಟ್ಟಿದ್ದ ಸಾಮಾಗ್ರಿಗಳೂ ನಾಶವಾಗಿವೆ ಎನ್ನಲಾಗಿದೆ.

ಅಕ್ಟೋಬರ್ ನಿಂದ ವಿಶ್ವಕಪ್ ಪಂದ್ಯಾಟ :
ಅಕ್ಟೋಬರ್ 5 ರಿಂದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಕೂಟ ನಡೆಯಲಿದ್ದು ಮೊದಲ ಪಂದ್ಯ ನೆದರ್ಲೆಂಡ್ಸ್ ಮತ್ತು ಬಾಂಗ್ಲಾದೇಶ ನಡುವೆ ಅಕ್ಟೋಬರ್ 28 ರಂದು ನಡೆಯಲಿದೆ. ನವೆಂಬರ್ 5 ರಂದು ಈ ಮೈದಾನದಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಇತ್ತೀಚೆಗಷ್ಟೇ ಐಸಿಸಿ ತಂಡವೊಂದು ಈ ಕ್ರೀಡಾಂಗಣದ ವ್ಯವಸ್ಥೆಯನ್ನು ನೋಡಲು ಬಂದಿತ್ತು.

Advertisement

ಇದನ್ನೂ ಓದಿ: Uttarakhand: ಭಾರಿ ಮಳೆಗೆ 9 ಮಂದಿ ಮೃತ್ಯು… ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ

Advertisement

Udayavani is now on Telegram. Click here to join our channel and stay updated with the latest news.

Next