ಕುಷ್ಟಗಿ: ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಕುಷ್ಟಗಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಾಜಿ ದೇವದಾಸಿ ಪುನರ್ವಸತಿ ಯೋಜನೆ ಸಹಯೋಗದಲ್ಲಿ ರಾಷ್ಟ್ರೀಯ ಗ್ರಾಹಕರ ದಿನ ಹಾಗೂ ಹಿರಿಯ ನಾಗರಿಕರಿಗೆ ಸೇವೆಗಳು ಹಾಗೂ ದೇವದಾಸಿ ಮಹಿಳೆಯರಿಗೆ ನ್ಯಾಯಾಲಯದ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಹೊನ್ನುಸ್ವಾಮಿ ಅವರು ಮಾತನಾಡಿ, ದೇವದಾಸಿ ಪದ್ಧತಿ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಮರಳುತ್ತಿರುವುದು ಸಂತೋಷದ ಸಂಗತಿ. ಈ ಅನಿಷ್ಟ ಪದ್ಧತಿಯನ್ನು ಕೈಬಿಟ್ಟು ಮಕ್ಕಳು, ಮೊಮ್ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.
ಇದನ್ನೂ ಓದಿ:ನಿರಾತಂಕವಾಗಿ ನಡೆದ ಮತ ಎಣಿಕೆ
ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ತಳವಾರ, ಹೆಚ್ಚುವರಿ ಸಿವಿಲ್ ನ್ಯಾಯಾ ಧೀಶ ರಫಿಕ್ ಅಹ್ಮದ್, ಸಹಾಯಕ ಸರ್ಕಾರಿ ಅಭಿಯೋಜಕ ರಾಯನಗೌಡ
ನಾಯಕ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಹೊಳಿಯಪ್ಪ ಕುರಿ, ದೇವದಾಸಿ ಪುನರ್ವಸತಿ ಯೋಜನೆ ಅನುಷ್ಠಾನಾಧಿ ಕಾರಿ ಮರಿಯಪ್ಪ ಮುಳ್ಳೂರು, ಯಲಬುರ್ಗಾ ಅನುಷ್ಠಾನಾಧಿ ಕಾರಿ ರೇಣುಕಾ ಮಠದ್, ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಈಳಗೇರ ಇದ್ದರು.