Advertisement

‘ಮಕ್ಕಳಿಗೆ ಶಿಕ್ಷಣ ನೀಡಿ ಉತ್ತಮ ಪ್ರಜೆಯಾಗಿ ರೂಪಿಸಿ’

11:56 PM Jun 18, 2019 | Team Udayavani |

ಮಡಿಕೇರಿ: ಹದಿನಾಲ್ಕು ವರ್ಷ ದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವಂತಾಗಬೇಕು. ಇದರಿಂದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬಹುದು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಅವರು ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪೋಲಿಸ್‌, ನಗರಸಭೆ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ವಕೀಲರ ಸಂಘ, ಕೊಡಗು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸರಕಾರೇತರ ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ಎನ್ನುವುದು ಒಂದು ಪ್ರಮುಖ ಅಸ್ತ್ರವಾಗಿದೆ.

ಎಲ್ಲ ಮಕ್ಕಳು ಶಿಕ್ಷಣವಂತರಾದರೆ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ. ಈ ದಿಕ್ಕಿನಲ್ಲಿ ಸರಕಾರರ ಮಕ್ಕಳ ಶಿಕ್ಷಣಕ್ಕೆ ಹಲವು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಸಹ ಶ್ರಮಿಸುತ್ತಿದ್ದು, ಅದರಂತೆ 2019ರ ಘೋಷ ವಾಕ್ಯ, ಮಕ್ಕಳು ದುಡಿಯಬೇಕಾದದ್ದು ಅವರ ಕನಸುಗಳ ಮೇಲೆ ಹೊರತು ಕ್ಷೇತ್ರದಲ್ಲಿ ಅಲ್ಲ ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸುತ್ತಿದ್ದೇವೆ ಎಂದರು.

ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್‌ ಅವರು ಮಾತನಾಡಿದರು. ಒಡಿಪಿ ಸಂಸ್ಥೆಯ ಜಾಯ್ಸ ಮೆನೇಜಸ್‌, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ವಕೀಲರಾದ ಎಂ.ಎ. ನಿರಂಜನ ಅವರು ಉಪಸ್ಥಿತರಿದ್ದರು.

Advertisement

ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಸ್ವಾಗತಿಸಿದರು, ಜಯಪ್ಪ ನಿರೂಪಿಸಿದರು, ಸಂತ ಮೈಕಲರ ಶಾಲೆಯ ವಿದ್ಯಾರ್ಥಿ ನಿಯರು ನಾಡಗೀತೆ ಹಾಡಿದರು, ಮಹಮ್ಮದ್‌ ಶಿರಾಜ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next