Advertisement

ಶಿಕ್ಷಣ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ

03:45 AM Mar 24, 2017 | |

ವಿಧಾನಸಭೆ: ಶಿಕ್ಷಕ ವರ್ಗ ಪರೀಕ್ಷಾ ಮೌಲ್ಯಧಿಮಾಪನ ಬಹಿಷ್ಕರಿಸಿ ಪ್ರತಿಭಟಿಸಿದರೆ ಆರು ತಿಂಗಳು ಜೈಲು ಅಥವಾ ಒಂದು ಲಕ್ಷದ ರೂಪಾಯಿವರೆಗೆ ದಂಡ ತೆರುವುದು ಸೇರಿದಂತೆ ಪರೀಕ್ಷಾ ಅಕ್ರಮ ಮತ್ತು ಮೌಲ್ಯಮಾಪನ ಕುರಿತಂತೆ ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿಯೊಂದಿಗೆ ಅಂಗೀಕೃತವಾಗಿದ್ದ ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕ-2017ಕ್ಕೆ ವಿಧಾನಸಭೆ ಸರ್ವಾನುಮತದ ಒಪ್ಪಿಗೆ ನೀಡಿದೆ.

Advertisement

ವಿಧಾನಸಭೆಯಲ್ಲಿ ಈ ಹಿಂದೆ ಅಂಗೀಕೃತವಾಗಿದ್ದ ಈ ವಿಧೇಯಕ ತೀವ್ರ ವಿವಾದಕ್ಕೆ ಒಳಗಾಗಿತ್ತು. ಅಲ್ಲದೆ, ಉಪನ್ಯಾಸಕರು ಮತ್ತು ಶಿಕ್ಷಕರ ವಿರೋಧಕ್ಕೂ ಕಾರಣವಾಗಿತ್ತು. ಹೀಗಾಗಿ ವಿಧಾನಪರಿಷತ್ತಿನಲ್ಲಿ ವಿಧೇಯಕ ತಡೆಹಿಡಿದು ತಿದ್ದುಪಡಿಗಾಗಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ನೀಡಿದ ವರದಿ ಆಧರಿಸಿ ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ ವಿಧೇಯಕಕ್ಕೆ ಮತ್ತಷ್ಟು ತಿದ್ದುಪಡಿಗಳನ್ನು ಮಾಡಿ ಅಂಗೀಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಮಾಡಿದ ತಿದ್ದುಪಡಿಗಳೊಂದಿಗೆ ವಿಧಾನಸಭೆಯಲ್ಲಿ ಮತ್ತೂಮ್ಮೆ ವಿಧೇಯಕವನ್ನು ಅಂಗೀಕರಿಸಲಾಯಿತು.

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸುವ ಅಂಶವೂ ಈ ವಿಧೇಯಕದಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next