Advertisement

ಶಿಕ್ಷಣ ಇಲಾಖೆ ವಿವಿಧ ಹುದ್ದೆಗಳಿಗೆ ಕೌನ್ಸೆಲಿಂಗ್‌

04:37 PM Jul 25, 2018 | Team Udayavani |

ಧಾರವಾಡ: ಇಲ್ಲಿಯ ಡಯಟ್‌ ಆವರಣದ ಡೆಪ್ಯುಟಿ ಚನ್ನಬಸಪ್ಪ ಸಮಾವೇಶ ಭವನದಲ್ಲಿ ಮಂಗಳವಾರ ಜರುಗಿದ ಶಿಕ್ಷಣ ಇಲಾಖೆಯ ಆನ್‌ಲೈನ್‌ ಕೌನ್ಸೆಲಿಂಗ್‌ನಲ್ಲಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಆದೇಶ ಪತ್ರ ನೀಡಿ ಸ್ಥಳ ನಿಯುಕ್ತಿಗೊಳಿಸಲಾಯಿತು. ಇಲಾಖೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮೊದಲ 3 ರ್‍ಯಾಂಕ್‌  ಗಳಿಸಿದ ಕಾಡಪ್ಪ ಕೋಳೂರು, ಬಿ.ಬಿ. ದುಬ್ಬನಮರಡಿ ಹಾಗೂ ಪೂರ್ಣಿಮಾ ಮುಕ್ಕುಂದಿ ಅವರು ಆಯ್ಕೆ ಮಾಡಿಕೊಂಡಂತೆ ಧಾರವಾಡ ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕರ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಆದೇಶಗಳನ್ನು ಅಪರ ಆಯುಕ್ತರು ನೀಡಿದರು.

Advertisement

31 ವಿಷಯ ಪರಿವೀಕ್ಷಕರು, 9 ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳು, 12 ಸಮಗ್ರ ಶಿಕ್ಷಣ ಅಭಿಯಾನದ ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ 67 ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರ ಹುದ್ದೆಗಳು ಸೇರಿದಂತೆ ವಾಯವ್ಯ ಕರ್ನಾಟಕ ವಲಯದ 9 ಜಿಲ್ಲೆಗಳ ವ್ಯಾಪ್ತಿಯ ಒಟ್ಟು 119 ಅಧಿಕಾರಿಗಳ ಹುದ್ದೆಗಳಿಗೆ ಕೌನ್ಸೆಲಿಂಗ್‌ ನಡೆಸಿ ಆದೇಶಗಳನ್ನು ನೀಡಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಆದೇಶ ಪತ್ರ ನೀಡಿ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಗುಣಾತ್ಮಕ ಶಿಕ್ಷಣಕ್ಕಾಗಿ ಹೊಸ ಚಿಂತನೆಯ ಅನೇಕ ಯೋಜನೆ-ಯೋಚನೆಗಳನ್ನು ಅಳವಡಿಸಲಾಗಿದ್ದು, ಇದಕ್ಕೆ ಪೂರಕವಾಗಿ ಶಿಕ್ಷಣಾಧಿಕಾರಿಗಳು ಕ್ರಿಯಾಶೀಲ ಕರ್ತವ್ಯ ದೊಂದಿಗೆ ಬದಲಾವಣೆಗೆ ತೆರೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ವಾಯವ್ಯ ಕರ್ನಾಟಕ ವಲಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ನಿರ್ದೇಶಕ ಎನ್‌.ಎಸ್‌. ಕುಮಾರ, ಸಿಸ್ಲೆಪ್‌- ಕರ್ನಾಟಕ ಸಂಸ್ಥೆಯ ನಿರ್ದೇಶಕ ಬಿ.ಎಸ್‌. ರಘುವೀರ, ಜಂಟಿ ನಿರ್ದೇಶಕ ಡಾ| ಬಿ.ಕೆ.ಎಸ್‌.ವರ್ಧನ್‌, ಉಪನಿರ್ದೇಶಕ ಮೃತ್ಯುಂಜಯ ಕುಂದಗೋಳ, ಹಿರಿಯ ಸಹಾಯಕ ನಿರ್ದೇಶಕ ಅರ್ಜುನ ಕಂಬೋಗಿ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next