Advertisement

Moodabidri ಯುವರಾಜ ಜೈನ್‌ಗೆ ಎಜುಕೇಶನ್‌ ಎಕ್ಸಲೆನ್ಸ್‌ ಪ್ರಶಸ್ತಿ

11:28 PM Oct 01, 2023 | Team Udayavani |

ಮೂಡುಬಿದಿರೆ: “ಅಂತಾರಾಷ್ಟ್ರೀಯ ಎಜುಕೇಶನ್‌ ಆ್ಯಂಡ್‌ ಮ್ಯಾನೇಜ್ಮೆಂಟ್ ಸಂಸ್ಥೆ’ ಕೊಡಮಾಡುವ ಪ್ರತಿಷ್ಠಿತ “ಗ್ಲೋಬಲ್‌ ಅಂಬಾಸಿಡರ್‌ ಆಫ್‌ ಎಜುಕೇಶನ್‌ ಎಕ್ಸಲೆನ್ಸ್‌ ಪ್ರಶಸ್ತಿ’ ಯನ್ನು ಇಲ್ಲಿನ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್‌ ಅವರಿಗೆ ಸೆ. 30ರಂದು ಹೊಸದಿಲ್ಲಿಯಲ್ಲಿ ಪ್ರದಾನ ಮಾಡಲಾಯಿತು.

Advertisement

ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅನನ್ಯ, ಅಪೂರ್ವ ಕೊಡುಗೆಗಾಗಿ ಈ ಪ್ರಶಸ್ತಿಯನ್ನು ಕೊಡಲಾಗಿದೆ. ಇದೇ ಸಂದರ್ಭ “ವಿದ್ಯಾಭ್ಯಾಸ ಮತ್ತು ಸಾಮಾಜಿಕ-ಆರ್ಥಿಕ ಪ್ರಗತಿ’ ವಿಷಯದ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣ ನಡೆಯಿತು.

ಯುವರಾಜ್‌ ಜೈನ್‌ ಅವರು ಇಲ್ಲಿನ ಕಲ್ಲಬೆಟ್ಟುವಿನಲ್ಲಿ ಎಕ್ಸಲೆಂಟ್‌ ಶಿಕ್ಷಣ ಸಂಸ್ಥೆಗಳ ಮೂಲಕ ಗುರುಕುಲ ಮಾದರಿಯಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿದ್ದಾರೆ. ಇಲ್ಲಿರುವ ಬದ್ಧತೆ, ಶಿಕ್ಷಣ ಪ್ರೀತಿ, ಸಾಮಾಜಿಕ ಕಳಕಳಿಯ ಮೂಲಕ ನಾಡಿನೆಲ್ಲೆಡೆ ಹೆಸರುವಾಸಿಯಾಗಿದ್ದಾರೆ.

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ಮಾಡಿ ವಿದ್ಯಾರ್ಥಿಗಳು ವೃತ್ತಿ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯುವಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಕಲ್ಲಬೆಟ್ಟು ವನ್ನು ಕೇಂದ್ರವಾಗಿರಿಸಿಕೊಂಡು ವಿವಿಧ ಜಿಲ್ಲೆಗಳಲ್ಲಿ ಮಾದರಿ ಶಿಕ್ಷಣ ಪದ್ಧತಿಯನ್ನು ಪರಿಚಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next