Advertisement

Education ಹೆಡ್ಗೆವಾರ್,ಸಾವರ್ಕರ್ ಪಠ್ಯಕ್ಕೆ ಕೊಕ್; ನೆಹರು ವಿಚಾರ ಸೇರ್ಪಡೆ

03:54 PM Jun 15, 2023 | Team Udayavani |

ಬೆಂಗಳೂರು : ಪಠ್ಯ ಪುಸ್ತಕದಲ್ಲಿರುವ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ.

Advertisement

ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರ ‘ನೀ ಬರೆದ ಪತ್ರ’,ಸಾವಿತ್ರಿ ಬಾಯಿ ಪುಲೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯವನ್ನು ಮರು ಸೇರ್ಪಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಕ್ರವರ್ತಿ ಸೂಲಿಬೆಲೆ ಅವರು ಬರೆದಿರುವ ರಾಜಗುರು, ಭಗತ್ ಸಿಂಗ್ ಮತ್ತು ಸುಖದೇವ್ ಅವರ ಕುರಿತಾಗಿರುವ ಪಠ್ಯವನ್ನು ಕೈಬಿಡಲು ತೀರ್ಮಾನಿಸಲಾಗಿದೆ.

8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ.ಗಟ್ಟಿ ಅವರು ಬರೆದಿದ್ದ ಸಾವರ್ಕರ್ ಅವರನ್ನು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಕುರಿತು ಬರೆದಿದ್ದ ಪ್ರವಾಸ ಕಥನ ಆಧಾರಿತ ‘ಕಾಲವನ್ನು ಗೆದ್ದವರು’ ಪಾಠವನ್ನು ಸೇರಿಸಲಾಗಿತ್ತು. ಈಗ ಕಾಂಗ್ರೆಸ್ ಸರಕಾರ ಆ ಪಠ್ಯವನ್ನು ಕೈಬಿಡಲು ತೀರ್ಮಾನಿಸಿದೆ.

Advertisement

10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣದ ತುಣುಕನ್ನು ಒಂದು ಅಧ್ಯಾಯವಾಗಿ ಸೇರ್ಪಡೆ ಮಾಡಲಾಗಿತ್ತು, ಅದನ್ನೂ ಈಗ ಕೈ ಬಿಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next