Advertisement

Education: ವಿದ್ಯಾವಿಕಾಸ ಅಕ್ರಮ ತನಿಖೆ: ಸಂಪುಟ ಸಭೆ ತೀರ್ಮಾನ

01:39 AM Sep 08, 2023 | Team Udayavani |

ಬೆಂಗಳೂರು: ಹಿಂದಿನ 2 ಶೈಕ್ಷಣಿಕ ವರ್ಷ ಗಳಲ್ಲಿ ವಿದ್ಯಾ ವಿಕಾಸ ಯೋಜನೆಯಡಿ ವಿದ್ಯಾರ್ಥಿ ಗಳಿಗೆ ಕಳಪೆ ಸಮವಸ್ತ್ರ ಪೂರೈಕೆ ಮಾಡಿದ ಪ್ರಕರಣದ ಬಗ್ಗೆ ಇಲಾಖಾ ತನಿಖೆ ನಡೆಸಲು ರಾಜ್ಯ ಸರಕಾರವು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಿದೆ.

Advertisement

ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 13 ವಿಚಾರಗಳ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಲಾಗಿದೆ. ಪಂಚಾಯತ್‌ ರಾಜ್‌ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲು ವಿವಾದ ಇತ್ಯರ್ಥಗೊಳಿಸುವ ಸಂಬಂಧ ನ್ಯಾ| ಭಕ್ತವತ್ಸಲಂ ಸಮಿತಿ ನೀಡಿದ ವರದಿ ಸ್ವೀಕರಿಸುವ ವಿಚಾರದಲ್ಲಿ ಮತ್ತೆ ಸಮಯ ತೆಗೆದುಕೊಂಡಿದೆ. ಆದರೆ ಕಳಪೆ ಸಮವಸ್ತ್ರ ಪೂರೈಕೆ ಹಗರಣ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.

ಈ ಹಗರಣಕ್ಕೆ ಸಂಬಂಧಪಟ್ಟಂತೆ ಅಂದಿನ ಕೆಎಚ್‌ಡಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿತ್ತು. ಆದರೆ ಇಷ್ಟರಲ್ಲಿ ಪ್ರಕರಣ ಅಂತ್ಯಗೊಳ್ಳುವುದಕ್ಕೆ ಬಿಡುವುದು ಸೂಕ್ತವಲ್ಲ ಎಂದು ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದ ಬಳಿಕ ಇಲಾಖಾ ತನಿಖೆ ನಡೆಸುವುದು ಸೂಕ್ತ ಎಂದು ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ. ಪಾಟೀಲ್‌ ವಿವರಿಸಿದರು.

ಇದಲ್ಲದೆ ಸಾರಿಗೆ ಇಲಾಖೆಗೆ ಬಸ್‌ ಖರೀದಿಗಾಗಿ 500 ಕೋಟಿ ರೂ. ಮೀಸಲು ಇರಿಸಲಾಗಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿಗೆ ತಲಾ 150 ಕೋಟಿ ರೂ. ನೀಡಲಾಗಿದ್ದು, ಅದರಲ್ಲಿ 320 ಎಲೆಕ್ಟ್ರಿಕ್‌ ಬಸ್‌ ಖರೀದಿಸಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next