Advertisement

Yashpal Suvarna ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ

12:57 AM Jun 01, 2024 | Team Udayavani |

ಉಡುಪಿ: ಎಸೆಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಉಡುಪಿಯ ಕೀರ್ತಿಯನ್ನು ಪಸರಿಸುವ ಕೆಲಸ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರ ಹಾಗೂ ಶಿಕ್ಷಣ ಇಲಾಖೆಯ ಪರಿಶ್ರಮದಿಂದ ಯಶಸ್ವಿಯಾಗಿದೆ.

Advertisement

ದೇಶದ ಭವಿಷ್ಯ ಬರೆಯಲಿರುವ ವಿದ್ಯಾವಂತ ಯುವ ಜನಾಂಗದಿಂದ ಮಾತ್ರ ಸಧೃಡ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಸಾಧನೆ ಇದೇ ರೀತಿ ನಿರಂತರವಾಗಿ ಮುಂದುವರೆದು ಇತರರಿಗೂ ಮಾದರಿಯಾಗಲಿ ಎಂದು ಪುಷ್ಪಾನಂದ ಫೌಂಡೇಶನ್‌ ಪ್ರವರ್ತಕ, ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಫೌಂಡೇಶನ್‌ ವತಿಯಿಂದ ಆಯೋಜಿಸಿದ್ದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ನಿವೃತ್ತ ಪ್ರಾಂಶುಪಾಲೆ ಹಂಸಾವತಿ, ತಾರಾದೇವಿ, ಸಮಾಜ ಸೇವಕಿ ನಿರುಪಮಾ ಪ್ರಸಾದ್‌ ಶೆಟ್ಟಿ ಉಪಸ್ಥಿತರಿದ್ದರು.

ಫೌಂಡೇಶನ್‌ ವತಿಯಿಂದ ಶೇ. 100 ಫಲಿತಾಂಶ ಪಡೆದ ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನ ಪತ್ರದೊಂದಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಶಾಲೆಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next