Advertisement

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೂ ಕೋವಿಡ್ ಸೋಂಕು ದೃಢ

08:07 PM Oct 05, 2020 | Mithun PG |

ಬೆಂಗಳೂರು: ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೋವಿಡ್-19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕವಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು 1,15,574 ಸಕ್ರೀಯ ಪ್ರಕರಣಗಳಿವೆ. 5,15,782 ಜನರು ಕೋವಿಡ್ ನಿಂದ ಚೇತರಿಸಿಕೊಂಡಿದ್ದು, 6,40,661 ಖಚಿತ ಪ್ರಕರಣಗಳೀವೆ . ಈವರೆಗೂ ಸುಮಾರು 9,286 ಜನರು ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next