ಬೆಂಗಳೂರು: ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ಶಾಲೆಯಿಂದ ದ್ವಿತೀಯ ಪಿಯುಸಿವರೆಗೆ ತರಗತಿಗಳನ್ನು ಯಾವಾಗ ಆರಂಭಿಸಬಹುದು ಮತ್ತು ಯಾವ ತರಗತಿಗಳಿಗೆ ಮೊದಲು ಶಾಲೆ ಆರಂಭಿಸಬಹುದು ಎಂದು ಸಮುದಾಯ ಹಾಗೂ ಜನಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಲು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಂದಾಗಿದ್ದಾರೆ.
ಈ ಸಂಬಂಧ ಮುಂದಿನ 2 ದಿನಗಳಲ್ಲಿ ತಮ್ಮ ಸಲಹೆ-ಸೂಚನೆಗಳನ್ನು nimmasuresh2019@gmail.comಗೆ ತಿಳಿಸುವಂತೆ ಕೋರಿ ರಾಜ್ಯದ ಸಚಿವರು ಹಾಗೂ ಶಾಸಕರಿಗೆ ಪತ್ರ ಬರೆದಿದ್ದಾರೆ.
ಜನಪ್ರತಿನಿಧಿಗಳಿಂದ ಬರುವ ಸಲಹೆ-ಸೂಚನೆಗಳು ಶೈಕ್ಷಣಿಕವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಲಿದೆ.
ಶಿಕ್ಷಣ ಇಲಾಖೆಯು ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳನ್ನು ಪುನಾರಂಭಿಸಲು ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆಗಳು ಹಾಗೂ ಪ್ರಮಾಣಿತ ಕಾರ್ಯಾಚರಣ ವಿಧಾನಗಳನ್ನು (ಎಸ್‌ಒಪಿ) ಸಿದ್ಧಪಡಿಸಲಾಗಿದೆ.
ಮಾರ್ಗಸೂಚಿ ಜತೆಗೆ ತಮ್ಮ ಸಲಹೆಗಳನ್ನು ಆಧರಿಸಿ ಶಾಲೆಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.