Advertisement
ಶಾಲೆ ಬಗ್ಗೆ ಮೆಚ್ಚುಗೆಈ ವೇಳೆ ಮಕ್ಕಳು ರಚಿಸಿದ ವಿಜ್ಞಾನ ಮಾದರಿಯ ವಸ್ತುಗಳನ್ನು ಸಹ ವೀಕ್ಷಿಸಿದರು. ಇಲ್ಲಿನ ಸುಂದರ ಪರಿಸರ, ಕಲಿಕೆಗೆ ಪೂರಕ ವಾತಾವರಣವಿರುವುದನ್ನು ಕಂಡು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸರಕಾರದ ಸೌಲಭ್ಯಗಳ ಜತೆಗೆ, ದಾನಿಗಳ ಸಹಕಾರದೊಂದಿಗೆ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವಲ್ಲಿ ಶ್ರಮಿಸುತ್ತಿರುವ ಶಿಕ್ಷಕ ವೃಂದದವರು, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘದ ಪ್ರಯತ್ನವನ್ನು ಶ್ಲಾಘಿಸಿದರು.
Related Articles
Advertisement
ತೆಕ್ಕಟ್ಟೆ ಕುವೆಂಪು ಶಾಲೆಗೆ ಭೇಟಿತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸ.ಮಾ.ಹಿ.ಪ್ರಾ. ಶಾಲೆಗೆ ಸಚಿವ ಬಿ.ಸಿ. ನಾಗೇಶ್ ಅವರು ಭೇಟಿ ನೀಡಿದ ವೇಳೆ ಅವರನ್ನು ಸಮ್ಮಾನಿಸಲಾಯಿತು. ಶಿಕ್ಷಕರ ಕೊರತೆಯನ್ನು ನೀಗಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷೆ ಮಮತಾ ದೇವಾಡಿಗ, ಉಪಾಧ್ಯಕ್ಷ ಸಂಜೀವ ದೇವಾಡಿಗ, ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್ ಪೂಜಾರಿ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಡಿಡಿಪಿಐ ಎನ್.ಎಚ್. ನಾಗೂರ, ತೆಕ್ಕಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಆಚಾರ್ಯ, ಮಾಜಿ ಜಿ.ಪಂ. ಸದಸ್ಯ ಗಣಪತಿ ಟಿ. ಶ್ರೀಯಾನ್, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಕಾಡೂರು ಸುರೇಶ್ ಶೆಟ್ಟಿ, ಗ್ರಾ.ಪಂ.ನ ಸದಸ್ಯರು, ಮುಖ್ಯ ಶಿಕ್ಷಕಿ ಲಲಿತ ಸಖಾರಾಂ, ಹಿರಿಯ ಶಿಕ್ಷಕ ವಕ್ವಾಡಿ ವೇಣುಗೋಪಾಲ್ ಹೆಗ್ಡೆ, ದೈಹಿಕ ಶಿಕ್ಷಣ ಶಿಕ್ಷಕ ಸದಾರಾಮ ಶೆಟ್ಟಿ ಮಲ್ಯಾಡಿ, ಸದಾನಂದ ಶೆಟ್ಟಿ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.