Advertisement

ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದು ಖುಷಿ ಪಟ್ಟ ಶಿಕ್ಷಣ ಸಚಿವರು

07:29 PM Oct 08, 2021 | Team Udayavani |

ಕುಂದಾಪುರ/ತೆಕ್ಕಟ್ಟೆ: ಗ್ರಾಮೀಣ ಭಾಗದ, ಪಶ್ಚಿಮ ಘಟ್ಟದ ತಪ್ಪಲಿನ ಅಮಾಸೆಬೈಲಿನ ಸ.ಹಿ.ಪ್ರಾ. ಶಾಲೆಗೆ, ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸ.ಮಾ.ಹಿ.ಪ್ರಾ. ಶಾಲೆಗೆ ಶುಕ್ರವಾರ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಭೇಟಿ ನೀಡಿದರಲ್ಲದೆ, ತರಗತಿಗೂ ಹೋಗಿ ಮಕ್ಕಳೊಂದಿಗೆ ಕೆಲವು ಕಾಲ ಕಳೆದು ಖುಷಿ ಪಟ್ಟರು.

Advertisement

ಶಾಲೆ ಬಗ್ಗೆ ಮೆಚ್ಚುಗೆ
ಈ ವೇಳೆ ಮಕ್ಕಳು ರಚಿಸಿದ ವಿಜ್ಞಾನ ಮಾದರಿಯ ವಸ್ತುಗಳನ್ನು ಸಹ ವೀಕ್ಷಿಸಿದರು. ಇಲ್ಲಿನ ಸುಂದರ ಪರಿಸರ, ಕಲಿಕೆಗೆ ಪೂರಕ ವಾತಾವರಣವಿರುವುದನ್ನು ಕಂಡು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸರಕಾರದ ಸೌಲಭ್ಯಗಳ ಜತೆಗೆ, ದಾನಿಗಳ ಸಹಕಾರದೊಂದಿಗೆ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವಲ್ಲಿ ಶ್ರಮಿಸುತ್ತಿರುವ ಶಿಕ್ಷಕ ವೃಂದದವರು, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘದ ಪ್ರಯತ್ನವನ್ನು ಶ್ಲಾಘಿಸಿದರು.

ಸಮ್ಮಾನ: ಸಚಿವರನ್ನು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ, ದಾನಿ, ಗೀತಾ ಎಚ್‌.ಎಸ್‌.ಎನ್‌. ಫೌಂಡೇಶನ್‌ ಟ್ರಸ್ಟ್‌ ಅಧ್ಯಕ್ಷ ಶಂಕರ್‌ ಐತಾಳ್‌ ಅವರು ಶಾಲೆಯ ಪರವಾಗಿ ಸಮ್ಮಾನಿಸಿದರು.

ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್‌ ಕೊಡ್ಗಿ, ಸಚಿವರ ಆಪ್ತ ಕಾರ್ಯದರ್ಶಿ ರವಿ, ಉಡುಪಿ ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಡಯಟ್‌ ಪ್ರಾಂಶುಪಾಲ ವೇದಮೂರ್ತಿ, ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾ ಧಿಕಾರಿ ಎಸ್‌.ಕೆ. ಪದ್ಮನಾಭ, ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ, ಅಮಾಸೆಬೈಲು ವ್ಯ.ಸೇ.ಸ. ಸಂಘದ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣ ಕುಮಾರ್‌ ಭಾಗವತ್‌, ನಿರ್ದೇಶಕ ಸದಾನಂದ ಶೆಟ್ಟಿ, ಎಸ್‌ಡಿಎಂಸಿಯ ಪ್ರಮುಖರು, ಮುಖ್ಯ ಶಿಕ್ಷಕ ಶೇಖರ್‌, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇದನ್ನೂ ಓದಿ:“ಅತಿಥಿ ಶಿಕ್ಷಕರನ್ನು ನೇಮಿಸಲು ಇಲಾಖೆಗೆ ಸ್ಪಷ್ಟ ಆದೇಶ’

Advertisement

ತೆಕ್ಕಟ್ಟೆ ಕುವೆಂಪು ಶಾಲೆಗೆ ಭೇಟಿ
ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸ.ಮಾ.ಹಿ.ಪ್ರಾ. ಶಾಲೆಗೆ ಸಚಿವ ಬಿ.ಸಿ. ನಾಗೇಶ್‌ ಅವರು ಭೇಟಿ ನೀಡಿದ ವೇಳೆ ಅವರನ್ನು ಸಮ್ಮಾನಿಸಲಾಯಿತು. ಶಿಕ್ಷಕರ ಕೊರತೆಯನ್ನು ನೀಗಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷೆ ಮಮತಾ ದೇವಾಡಿಗ, ಉಪಾಧ್ಯಕ್ಷ ಸಂಜೀವ ದೇವಾಡಿಗ, ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್‌ ಪೂಜಾರಿ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ ಕೊಡ್ಗಿ, ಡಿಡಿಪಿಐ ಎನ್‌.ಎಚ್‌. ನಾಗೂರ, ತೆಕ್ಕಟ್ಟೆ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಆಚಾರ್ಯ, ಮಾಜಿ ಜಿ.ಪಂ. ಸದಸ್ಯ ಗಣಪತಿ ಟಿ. ಶ್ರೀಯಾನ್‌, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಗೋಪಾಡಿ, ಸತೀಶ್‌ ಪೂಜಾರಿ ವಕ್ವಾಡಿ, ಕಾಡೂರು ಸುರೇಶ್‌ ಶೆಟ್ಟಿ, ಗ್ರಾ.ಪಂ.ನ ಸದಸ್ಯರು, ಮುಖ್ಯ ಶಿಕ್ಷಕಿ ಲಲಿತ ಸಖಾರಾಂ, ಹಿರಿಯ ಶಿಕ್ಷಕ ವಕ್ವಾಡಿ ವೇಣುಗೋಪಾಲ್‌ ಹೆಗ್ಡೆ, ದೈಹಿಕ ಶಿಕ್ಷಣ ಶಿಕ್ಷಕ ಸದಾರಾಮ ಶೆಟ್ಟಿ ಮಲ್ಯಾಡಿ, ಸದಾನಂದ ಶೆಟ್ಟಿ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next