Advertisement

ಶಿಕ್ಷಿತ ಮಕ್ಕಳು ಈ ದೇಶದ ಆಸ್ತಿ

03:57 PM Jul 01, 2018 | |

ಬೆಂಗಳೂರು: ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತರೆ ದೇಶದ ಆಸ್ತಿಯಾಗುತ್ತಾರೆ ಎಂದು ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

Advertisement

ರಕ್ಷಾ ಫೌಂಡೇಷನ್‌ನಿಂದ ನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 8ನೇ ವರ್ಷದ ಉಚಿತ ನೋಟ್‌ ಪುಸ್ತಕ ವಿತರಣೇ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್‌ ಕಲಾಂ ಬಡತನದ ಮಧ್ಯೆಯೂ ಶಿಕ್ಷಣ ಪಡೆದು ದೇಶದ ಆಸ್ತಿಯಾಗಿ ಬೆಳೆದರು. ಇಂತಹ ವ್ಯಕ್ತಿಗಳನ್ನು ಮಾದರಿಯಾಗಿಸಿಕೊಂಡು ವಿದ್ಯಾರ್ಥಿಗಳು ಶಿಕ್ಷಣ ಪಡೆದರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ಹೇಳಿದರು.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್‌ ಮಾತನಾಡಿ, ಇಂದಿನ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವುದರ ಜತೆಗೆ ಅವರಿಗೆ ಕನ್ನಡ ನಾಡು, ನುಡಿ, ದೇಶ ಹಾಗೂ ಪ್ರಕೃತಿ ಬಗ್ಗೆ ಅರಿವು ಮೂಡಿಸಬೇಕು. ಕೇವಲ ಸ್ವಾರ್ಥಕ್ಕೆ ಬಾಳದೆ, ಸಮಾಜದ ಏಳ್ಗೆಗೆ ಶ್ರಮಿಸಬೇಕು. ದೇಶ ಮತ್ತು ಸಂಸ್ಕೃತಿ ಬಗ್ಗೆ ಗೌರವದ ಭಾವನೆ ಹೊಂದಿರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 10 ಸಾವಿರ ವಿದ್ಯಾರ್ಥಿಗಳಿಗೆ 1 ಲಕ್ಷ ಪುಸ್ತಕಗಳು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 30 ವಿದ್ಯಾರ್ಥಿಗಳಿಗೆ ಐಪ್ಯಾಡ್‌ ಹಾಗೂ ಇಬ್ಬರು ವಿಕಲಚೇತನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ನೀಡಲಾಯಿತು. ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ವಿಧಾನ ಪರಿಷತ್‌ ಸದಸ್ಯೆ ತಾರಾ, ಬಿಜೆಪಿ ಮುಖಂಡ ಪ್ರಹ್ಲಾದ್‌ ಬಾಬು, ಪಾಲಿಕೆ ಮಾಜಿ ಸದಸ್ಯ ಸಿ.ಕೆ. ರಾಮಮೂರ್ತಿ ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next