ಮೈಸೂರು: ಶಿಕ್ಷಣ ಸಂಸ್ಥೆಗಳು ಪ್ರತಿಭಾವಂತ ವಿದ್ಯಾರ್ಥಿಗಳ ಜತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಏಳಿಗೆಗಾಗಿಯೂ ಶ್ರಮಿಸಬೇಕು ಎಂದು ನಗರ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಸಿ.ಗೋಪಾಲ್ ಹೇಳಿದರು.
ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ವಿದ್ಯಾಲಯದ ವತಿಯಿಂದ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಮಂಡಳಿಯನ್ನು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಹುತೇಕ ಶಿಕ್ಷಣ ಸಂಸ್ಥೆಗಳು ಉತ್ತಮ ಫಲಿತಾಂಶಕ್ಕಾಗಿ ಪೈಪೋಟಿ ನಡೆಸುತ್ತಿದ್ದು, ಇದಕ್ಕಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತವೆ.
ಆದರೆ ಶಿಕ್ಷಣ ಸಂಸ್ಥೆಗಳ ಕೇವಲ ಬುದ್ಧಿವಂತ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಒಲವು ತೋರುವ ಬದಲು ಗ್ರಾಮೀಣ ಹಾಗೂ ಮಧ್ಯಮವರ್ಗದ ಅವಕಾಶ ವಂಚಿತ ವಿದ್ಯಾರ್ಥಿಗಳ ಏಳಿಗೆಗಾಗಿಯೂ ಶ್ರಮಿಸಬೇಕಿದೆ ಎಂದರು. ಅಲ್ಲದೆ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆಗೆ ಕೌಶಲಗಳನ್ನು ಬೆಳೆಸುವ ಜವಾಬ್ದಾರಿಯೂ ಶಿಕ್ಷಣ ಸಂಸ್ಥೆಗಳ ಮೇಲಿದೆ.
ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪಠ್ಯದ ಜತೆಗೆ ಇನ್ನಿತರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಮುಂದಾಗಬೇಕು. ಅಲ್ಲದೆ ವಿದ್ಯಾರ್ಥಿಗಳು ಸಹ ಜೀವನದಲ್ಲಿ ಅನೇಕ ಕಷ್ಟಗಳನ್ನು ಎದುರಿಸಿ, ದೇಶಕ್ಕಾಗಿ ಶ್ರಮಿಸಿದ ಮಹನೀಯರನ್ನು ಆದರ್ಶವನ್ನಾಗಿಸಿಕೊಂಡು ಹೆಚ್ಚಿನ ಜಾnನಾರ್ಜನೆ ಹೊಂದುವ ಮೂಲಕ ಕುಟುಂಬ, ಸಮಾಜದ ಏಳಿಗೆಗೆ ಶ್ರಮಿಸಬೇಕು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಬಳಕೆಯಲ್ಲಿರುವ ಆಧುನಿಕ ತಂತ್ರಜಾnನ ಹಾಗೂ ಅಂತಜಾìಲ ಮಾಧ್ಯಮವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು. ಎಂಎಂಕೆ ಮತ್ತು ಎಸ್‌ಡಿಎಂ ಕಾಲೇಜು ಪ್ರಾಂಶುಪಾಲರಾದ ಪೊ›.ಎಂ.ವಿ.ಆಶಾ, ಎಂಎಂಕೆ ಮತ್ತು ಎಸ್‌ಡಿಎಂ ಮಹಾವಿದ್ಯಾಲಯ ಪ್ರಾಂಶುಪಾಲ ಪೊ›.ಸಾಯಿನಾಥ್ ಮಲ್ಲಿಗೆಮಾದು, ವಿದ್ಯಾರ್ಥಿ ಕಲ್ಯಾಣ ಅಧಿಕಾರಿಗಳಾದ ಎಚ್.ಜಯಶ್ರೀ, ಡಾ.ವಿನೋದ್ ಇನ್ನಿತರರು ಹಾಜರಿದ್ದರು.