Advertisement

ಹೆಣ್ಣು ಮಕ್ಕಳಿಗೆ ಶೈಕ್ಷಣಿಕ ನೆರವು: ಖಾಸಗಿ ಸಹಭಾಗಿತ್ವಕ್ಕೆ ಡಿಸಿಎಂ ಕರೆ

07:53 PM Aug 15, 2020 | mahesh |

ಬೆಂಗಳೂರು: ಪ್ರತಿಭಾವಂತ ವಿದ್ಯಾರ್ಥಿನಿಯರು ಶಿಕ್ಷಣದಲ್ಲಿ ಉನ್ನತಿಯತ್ತ ಸಾಗಬೇಕು. ಅದಕ್ಕಾಗಿ ಸರಕಾರವೂ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಇದರ ಜತೆಗೆ ಖಾಸಗಿ ವ್ಯಕ್ತಿಗಳು, ಸಂಘ-ಸಂಸ್ಥೆಗಳು ಕೂಡ ಹೆಚ್ಚಿನ ಪ್ರಮಾಣದಲ್ಲಿ ಕೈಜೋಡಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಕರೆ ನೀಡಿದರು.

Advertisement

ಬೆಂಗಳೂರಿನಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ‌ ಪಡೆದ ಮಲ್ಲೇಶ್ವರದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾಜ್ಯೋತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನೀಡಲಾದ ಸ್ಕಾಲರ್ ಶಿಪ್ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಅದರಲ್ಲೂ ಹೆಣ್ಣು ಮಕ್ಕಳಲ್ಲಿ ಅದಮ್ಯವಾದ ಶಕ್ತಿ ಇರುತ್ತದೆ. ಅವರ ಶಕ್ತಿ ಮತ್ತು ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಡಿಸಿಎಂ ಕರೆ ನೀಡಿದರು.

ಎಸ್ಸೆಸ್ಸೆಲ್ಸಿ ನಂತರದ ಶಿಕ್ಷಣದ ಘಟ್ಟ ಇನ್ನಷ್ಟು ಮಹತ್ವದ್ದು. ತದನಂತರದ ಘಟ್ಟ ಮತ್ತೂ ಮಹತ್ವದ್ದು. ಅದಕ್ಕಾಗಿ ಯುವ ಸಬಲೀಕರಣಕ್ಕೆ ಸರಕಾರ ಹೆಚ್ಚು ಆದ್ಯತೆ ಕೊಡುತ್ತಿದೆ. ಇದಕ್ಕೆ ಪೂರಕವಾದ ವಾತಾವರಣ ಹೈಸ್ಕೂಲು ಮತ್ತು ಪಿಯುಸಿ ಹಂತದಲ್ಲಿಯೇ ಇರಬೇಕು. ಶಿಕ್ಷಕ ವರ್ಗ ಈ ನಿಟ್ಟಿನಲ್ಲಿ ಹೆಚ್ಚು ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಬದಲಾವಣೆ: ಕೇಂದ್ರ ಸರಕಾರ ರೂಪಿಸಿರುವ ನೂತನ ಶಿಕ್ಷಣ ನೀತಿಯಿಂದ ದೇಶದ ಶೈಕ್ಷಣಿಕ ವ್ಯವಸ್ಥೆಯ ರೂಪವೇ ಬದಲಾಗಲಿದೆ. ಈ ನೀತಿಯಿಂದ ಸರಕಾರಿ ಶಿಕ್ಷಣಕ್ಕೆ ಹೊಸ ಆಯಾಮವೇ ಸಿಗಲಿದೆ. ಹೀಗಾಗಿ ಈ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ವಿದ್ಯಾಜ್ಯೋತಿ ಚಾರಿಟಬಲ್ ಟ್ರಸ್ಟ್,ನ ರಾಜೇಶ್, ಅನೇಕ ಪೋಷಕರು ಮತ್ತು ಸ್ಕಾಲರ್ ಶಿಪ್ ಪಡೆದ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next