Advertisement

ಶಿಕ್ಷಕರೇ ಉತ್ತಮ ಸಮಾಜ ನಿರ್ಮಾಪಕರು

01:32 PM Sep 30, 2018 | Team Udayavani |

ಔರಾದ: ಅಕ್ಷರ ಕ್ರಾಂತಿಯ ಮೂಲಕ ಯುವ ಮನಸ್ಸುಗಳಿಗೆ ಪ್ರೇರಣೆ ನೀಡಿ, ಶಿಕ್ಷಕರು ಉತ್ತಮ ಸಮಾಜದ ನಿರ್ಮಾಪಕರಾಗಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು. ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಡಿ ತಾಲೂಕಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ಡಾ|ಸರ್ವಪಲ್ಲಿ ರಾಧಾಕೃಷ್ಣನ್‌, ಅಬ್ದುಲ್‌ ಕಲಾಂ ಅವರಂತಹ ಮಹಾನ್‌ ವ್ಯಕ್ತಿಗಳ ಆದರ್ಶ ಅನುಕರಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

Advertisement

ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಒಡಿ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ನಿರಾಕರಿಸಿದ್ದರು. ಆದರೂ ಎಂಥದೇ ಪರಿಸ್ಥಿತಿಯಲ್ಲೂ ಶಿಕ್ಷಕರ ದಿನಾಚರಣೆ ಮಾಡೇ ಮಾಡುತ್ತೇನೆ. ಅದಕ್ಕೆ ಎಷ್ಟೇ ಅಡ್ಡಿ ಆತಂಕಗಳು ಬಂದರೂ ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ಅಮರೇಶ್ವರ ನಮಗೆ ನೀಡಿದ್ದಾನೆ ಎಂದು ಹೇಳಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದೇವರು ಮಾತನಾಡಿ, ಶಿಕ್ಷಕರ ಬಗ್ಗೆ ನಾಡಿನಲ್ಲಿಯೇ ಅಪಾರ ಗೌರವ, ಕಾಳಜಿ ಇರುವ ಏಕೈಕ ಶಾಸಕ ಪ್ರಭು ಚವ್ಹಾಣ ಅವರಾಗಿದ್ದಾರೆ. ಹಿಗಾಗಿಯೇ 11 ವರ್ಷಗಳಿಂದ ತಮ್ಮ ಕ್ಷೇತ್ರದ ಪ್ರತಿಯೊಬ್ಬ ಶಿಕ್ಷಕರನ್ನು ಸನ್ಮಾನಿಸಿ ಅವರ ಆತ್ಮಬಲ ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.

ಇಂದಿನ ಶಿಕ್ಷಕರಲ್ಲಿ ಆದರ್ಶ ಶಿಕ್ಷಕರ ಸಂಖ್ಯೆ ಕಡಿಮೆಯಾಗುತ್ತಿದೆ. ತಾಯಿ ತನ್ನ ಮಗುವಿಗೆ ಜನ್ಮ ನೀಡಿ ಭೂಮಂಡಲದ ಪರಿಚಯ ಮಾಡುತ್ತಾಳೆ. ಶಿಕ್ಷಕ ಮಗುವಿಗೆ ಅಕ್ಷರ ಜ್ಞಾನ ನೀಡಿ ಸಮಾಜದ ಪರಿಚರ ಮಾಡುತ್ತಾನೆ. ತಾಯಿ ಹಾಗೂ ಶಿಕ್ಷಕ ಮಗುವಿನ ಎರಡು ಕಣ್ಣುಗಳು ಇದ್ದಂತೆ ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ನಿಮಿತ್ತ ತಾಲೂಕಿನ ಐದು ಸಾವಿರ ಶಿಕ್ಷಕರನ್ನು ಶಾಸಕ ಪ್ರಭು ಚವ್ಹಾಣ ವಿಶೇಷವಾಗಿ ಸನ್ಮಾನಿಸಿದರು. ಪಪಂ ಅಧ್ಯಕ್ಷ ಸುನೀಲಕುಮಾರ ದೇಶಮುಖ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ಮೇತ್ರೆ, ಕಸಾಪ ತಾಲೂಕು ಅಧ್ಯಕ್ಷ ಜಗನ್ನಾಥ ಮೂಲಗೆ, ಜಾನಪದ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಸಂಜುಕುಮಾರ ಜುಮ್ಮಾ, ಬಸವರಾಜ ಶೆಟಕಾರ, ಜಿಪಂ ಸದಸ್ಯ ಮಾರುತಿ ಚವ್ಹಾಣ ಬಿಒ, ಬಿಆರ್‌ಸಿ ಸೇರಿದಂತೆ ಶಿಕ್ಷಣ
ಇಲಾಖೆಯ ಅಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next