Advertisement

ಸರ್ಕಾರದ ಹುಳುಕು ಮುಚ್ಚಿಕೊಳ್ಳಲು ದಕ್ಷ ಅಧಿಕಾರಿಗಳ ಎತ್ತಂಗಡಿ: ನವೀನ್

11:43 AM Jul 20, 2017 | |

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮೂರು ವರ್ಷಗಳಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಮತ್ತು
ಆರೆಸ್ಸೆಸ್‌ ಕಾರ್ಯಕರ್ತರ ಹತ್ಯೆಯಾಗಿದೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸೋತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲು ರಾಜ್ಯದ ಜನತೆಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಒತ್ತಾಯಿಸಿದರು.

Advertisement

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಅವರು
ಮಾತನಾಡಿದರು. ಕಾಂಗ್ರೆಸ್‌ ಸರ್ಕಾರದ ಹುಳುಕು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಕ್ಷ ಅಧಿಕಾರಿಗಳನ್ನು ಎತ್ತಂಗಡಿ ಮಾಡುತ್ತಿದ್ದಾರೆ. ನಿದ್ದೆಯಲ್ಲಿರುವ ಭ್ರಷ್ಟ ಸರ್ಕಾರವನ್ನು ಎಚ್ಚರಿಸುವುದಕ್ಕಾಗಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ನಡೆದಿರುವ ಬಿಜೆಪಿ ಹಾಗೂ ಆರೆಸ್ಸೆಸ್‌ ಕಾರ್ಯಕರ್ತರ ಹತ್ಯೆ ಬಗ್ಗೆ ರಾಷ್ಟ್ರೀಯ ತನಿಖಾ
ದಳದಿಂದ ತನಿಖೆಯಾಗಬೇಕು ಎಂದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಂ. ಚಂದ್ರಪ್ಪ, ಪಿ. ರಮೇಶ್‌, ಬಿಜೆಪಿ ವಿಭಾಗೀಯ ಸಹಪ್ರಭಾರಿ ಜಿ.ಎಂ. ಸುರೇಶ್‌, ಮಾಜಿ
ಅಧ್ಯಕ್ಷರಾದ ಟಿ.ಜಿ. ನರೇಂದ್ರನಾಥ್‌, ಸಿದ್ದೇಶ್‌ ಯಾದವ್‌, ಡಿ.ಟಿ. ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ, ಮುರಳಿ, ರತ್ನಮ್ಮ, ಮುಖಂಡರಾದ ಜೈಪಾಲ್‌, ನಾಗರಾಜ ಬೇದ್ರೆ, ದಗ್ಗೆ ಶಿವಪ್ರಕಾಶ್‌, ನರೇಂದ್ರ, ಶ್ಯಾಮಲಾ ಶಿವಪ್ರಕಾಶ್‌, ಮಹೇಶ್ವರಪ್ಪ, ನೆಲ್ಲಿಕಟ್ಟೆ ಜಗದೀಶ್‌, ಚಿತ್ರ ರವಿ, ಶಂಭು, ಶಿವಣ್ಣ ಆಚಾರ್‌, ಅರುಣ್‌, ವಿಜಯಕುಮಾರ್‌, ಶೈಲಜಾ ರೆಡ್ಡಿ, ಹನುಮಕ್ಕ,
ದಾಕ್ಷಾಯಿಣಿ, ಚಂದ್ರಿಕಾ ಲೋಕನಾಥ್‌, ರೇಖಾ, ಮೋಹನ್‌ ಸಿರಿಗೆರೆ ಮತ್ತಿತರರು ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next