ಹುಬ್ಬಳ್ಳಿ: ಕುಷ್ಠರೋಗ ನಿರ್ಮೂಲನೆಗಾಗಿ ಗ್ರಾಮಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದು ಅವಶ್ಯವೆಂದು ಕಿಮ್ಸ್‌ನ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ ಹೇಳಿದರು.
ಕಿಮ್ಸ್‌ನ ಪ್ರಾಂಶುಪಾಲ ಡಾ| ಚಂದ್ರು ಎಂ.ಸಿ., ಜಿಲ್ಲಾ ಕುಷ್ಠರೋಗ ಸಲಹೆಗಾರ ಡಾ| ಎ.ಬಿ. ಸಾಲಿ, ಕಿಮ್ಸ್‌ನ ಶರೀರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಕೆ.ಎಫ್. ಕಮ್ಮಾರ, ಚರ್ಮ ಮತ್ತು ಲೈಂಗಿಕ ರೋಗಗಳ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಮೋಹನ, ಜಿಲ್ಲಾ ಎನ್‌ವಿಬಿಡಿಸಿಪಿ ಅಧಿಕಾರಿ ಡಾ| ಎಸ್.ಕೆ. ಮಾನಕರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ತನುಜಾ ಕೆ.ಎನ್., ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ| ಪ್ರಮೀಳಾ ಡಿ., ಡಾ| ಪ್ರಭುಲಿಂಗ ಮಾನಕರ, ಡಾ| ಎಸ್.ಎನ್. ಮಸೂತಿ ಅತಿಥಿಗಳಾಗಿ ಆಗಮಿಸಿದ್ದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ| ಶಶಿ ಪಾಟೀಲ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ಉದ್ದೇಶ ತಿಳಿಸಿದರು. ಇದೇ ಸಂದರ್ಭದಲ್ಲಿ 2019-20ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ವೈದ್ಯರು, ಮೇಲ್ವಿಚಾರಕರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ಕಿಮ್ಸ್‌ನ ಎಲ್ಲ ವಿಭಾಗಗಳ ಮುಖ್ಯಸ್ಥರು, ವೈದ್ಯರು, ಧಾರವಾಡ ಜಿಲ್ಲೆಯ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಮೇಲ್ವಿಚಾರಕರು, ಆರೋಗ್ಯ ಸಹಾಯಕರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಮೊದಲಾದವರು ಪಾಲ್ಗೊಂಡಿದ್ದರು.
Advertisement
ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠರೋಗ ವಿಭಾಗ ಧಾರವಾಡ ಹಾಗೂ ಕಿಮ್ಸ್ ಆಶ್ರಯದಲ್ಲಿ ಇಲ್ಲಿನ ಕಿಮ್ಸ್‌ನ ಗೋಲ್ಡನ್ ಜುಬಲಿ ಹಾಲ್ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ 2019ರ ಅಭಿನಂದನಾ ಕಾರ್ಯಕ್ರಮ ಮತ್ತು 2019-20ನೇ ಸಾಲಿನ ಎನ್‌ಎಲ್ಇಪಿ ಮತ್ತು ಐಇಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರೂ ಉತ್ತಮವಾಗಿ ಕಾರ್ಯ ನಿರ್ವಹಿಸಿ ರೋಗಮುಕ್ತ ಸಮಾಜ ನಿರ್ಮಿಸಬೇಕು ಎಂದರು.