ಕಾರ್ಕಳ: ಬದುಕಿನಲ್ಲಿ ಶಿಸ್ತು ಬಹಳ ಮುಖ್ಯವಾಗಿದ್ದು, ಪ್ರಯತ್ನ, ಶ್ರದ್ಧೆ, ಶಿಸ್ತು ನಮ್ಮಲ್ಲಿದ್ದರೆ ಯಶಸ್ವಿ ವ್ಯಕ್ತಿಯಾಗಲು ಸಾಧ್ಯವೆಂದು ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಚೀಫ್ ಜೆನೆರಲ್ ಮ್ಯಾನೇಜರ್ ಕೆ. ದೇವಾನಂದ್ ಉಪಾಧ್ಯಾಯ ಅವರು ಹೇಳಿದರು.
ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ ಕೌಶಲಾಭಿವೃದ್ಧಿ ಸರಣಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ| ಮಂಜುನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೌಶಲ ತರಬೇತಿ ಕಾರ್ಯಕ್ರಮದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಮೂಲಕ ಉದ್ಯೋಗ ಪಡೆಯುವಲ್ಲಿ ಬಹಳಷ್ಟು ಸಹಕಾರಿ ಎಂದರು.
ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಭಾಕರ್ ಶೆಣೈ ಸ್ವಾಗತಿಸಿ, ವಾಣಿಜ್ಯ ವಿಭಾಗದ ಕೀರ್ತಿ ತಂತ್ರಿ ನಿರೂಪಿಸಿದರು. ಸಂಘದ ಸದಸ್ಯ ಸುಧೀಂದ್ರ ಕಾಮತ್ ವಂದಿಸಿದರು.