Advertisement

‘ಸಂಸ್ಕೃತಿಯ ಸಿರಿತನ ಉಳಿಸಲು ಯತ್ನ’

11:54 AM Mar 16, 2018 | Team Udayavani |

ಮಹಾನಗರ : ಸಂಸ್ಕೃ ತಿಯ ಸಿರಿತನವನ್ನು ಉಳಿಸುವ ಉದ್ದೇಶದಿಂದ ರಾಜ್ಯ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್‌.ಲೋಬೋ ಹೇಳಿದರು. ದ.ಕ. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ತುಳುಭವನದಲ್ಲಿ ಗುರುವಾರ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ನಾಡಿನ ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಕೋಟ್ಯಾಂತರ ರೂ. ಖರ್ಚು ಮಾಡಲಾಗುತ್ತಿದೆ. ಕಲಾವಿದರಿಗೆ ಪ್ರೇಕ್ಷಕರೇ ದೇವರು. ಇಂತಹ ಸಮಾರಂಭಕ್ಕೆ ನಾನಾ ಊರುಗಳಿಂದ ಕಲಾವಿದರು ಬಂದರೂ, ಪ್ರೇಕ್ಷಕರ ಕೊರತೆ ಇದ್ದರೆ ಪ್ರದರ್ಶನ ನೀಡಲು ಬೇಸರವಾಗುತ್ತದೆ. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿದ್ದೇವೆ ಎಂದರು.

ವೇದಿಕೆಯಲ್ಲಿ ಪಾಲಿಕೆ ಸದಸ್ಯ ರಾಧಾಕೃಷ್ಣ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಬಿ. ಉಪಸ್ಥಿತರಿದ್ದರು.

ಪ್ರೇಕ್ಷಕರ ಕೊರತೆ
ಸುಗ್ಗಿ-ಹುಗ್ಗಿ ಸಂಭ್ರಮಕ್ಕೆ ಪ್ರೇಕ್ಷಕರನ್ನು ಸೆಳೆಯುವಲ್ಲಿ ಇಲಾಖೆ ವಿಫಲವಾದುದ್ದು ಕಂಡುಬಂತು. ಕುರ್ಚಿಗಳೆಲ್ಲಾ ಖಾಲಿ ಖಾಲಿಯಾಗಿದ್ದುದನ್ನು ಕಂಡ ಶಾಸಕ ಜೆ.ಆರ್‌. ಲೋಬೋ ಅವರು ಕೂಡ ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ 18 ಸಾಂಸ್ಕೃತಿಕ ಪ್ರಾಕಾರಗಳಲ್ಲಿ ಸುಮಾರು 200 ಮಂದಿ ಕಲಾವಿದರು ಪ್ರದರ್ಶನ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next