Advertisement
ಅವರು ಹಿರ್ಗಾನ ಗ್ರಾ. ಪಂ.ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕೆರೆ ಅಭಿವೃದ್ಧಿಗೆ ಮನವಿ
ಹಿರ್ಗಾನ ವ್ಯಾಪ್ತಿಯ ವಿಶಾಲವಾದ ಕೆರೆಗಳನ್ನು ಅಭಿವೃದ್ಧಿಪಡಿಸಿದಲ್ಲಿ ಪಂ. ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಜತೆಗೆ ಅಂತರ್ಜಲ ಹೆಚ್ಚಳಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ತುರ್ತಾಗಿ ಕೆರೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಶಾಸಕರಲ್ಲಿ ಮನವಿ ಮಾಡಿದರು.
Related Articles
ಕಾಡು ಪ್ರಾಣಿಗಳು ಕೃಷಿ ಭೂಮಿ ಯಲ್ಲಿಯೇ ಸಂಚರಿಸುತ್ತಿದ್ದು ಇದನ್ನು ತಡೆಯುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಸದಸ್ಯರು ಹಾಗೂ ಸಾರ್ವಜನಿಕರು ಮನವಿ ಮಾಡಿದರು. ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಶಾಸಕರು ಹೇಳಿದರು.
Advertisement
ಪಂಚಾಯತ್ ವ್ಯಾಪ್ತಿಯಲ್ಲಿ 94ಸಿಯಡಿ ಅರ್ಜಿ ಸಲ್ಲಿಸಿದವರಿಗೆ ಕೂಡಲೇ ಅರ್ಜಿ ವಿಲೇವಾರಿ ಮಾಡಿ ಹಕ್ಕುಪತ್ರ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಪಂಚಾಯತ್ ಕ್ರಿಯಾ ಯೋಜನೆಗಳ ಕಾಮಗಾರಿಗಳ ಅಂದಾಜು ಪಟ್ಟಿಯನ್ನು ಒಂದು ತಿಂಗಳೊಳಗೆ ತಯಾರಿಸಿ ಗ್ರಾ. ಪಂ.ಗೆ ನೀಡುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಉದಯ ಕೋಟ್ಯಾನ್, ತಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಕೆರೆ,ಸೇತುವೆ ನಿರ್ಮಾಣಕ್ಕೆ ಅನುದಾನ: ಮನವಿ ಪಂ. ವ್ಯಾಪ್ತಿಯ ಚಿಕ್ಕಲ್‌ಬೆಟ್ಟು ಸೇತುವೆ ಕುಸಿಯುತ್ತಿರುವ ಬಗ್ಗೆ ಹಾಗೂ ಹರಿಯಪ್ಪ ಕೆರೆ ಅಭಿವೃದ್ಧಿಪಡಿಸುವ ಬಗ್ಗೆ ಉದಯವಾಣಿ ಪತ್ರಿಕೆಯು ವರದಿ ಮಾಡಿ ಬೆಳಕು ಚೆಲ್ಲಿತ್ತು.ಶಾಸಕರ ಅಹವಾಲು ಸ್ವೀಕಾರ ಸಂದರ್ಭ ಸಮಸ್ಯೆಯ ಬಗ್ಗೆ ಶಾಸಕರ ಗಮನ ಸೆಳೆದ ಗ್ರಾಮಸ್ಥರು ಮತ್ತು ಪಂಚಾಯತ್ ಅಧ್ಯಕ್ಷರು ಹಾಗು ಸದಸ್ಯರು ಪತ್ರಿಕೆಯಲ್ಲಿ ವರದಿಯಾದ ಬಗ್ಗೆ ಸಭೆಯ ಗಮನಕ್ಕೆ ತಂದರು.
ಶಾಸಕ ಸುನಿಲ್ ಕುಮಾರ್ ಚಿಕ್ಕಲ್‌ಬೆಟ್ಟು ಸೇತುವೆಗೆ ಅನುದಾನ ನೀಡುವ ಭರವಸೆ ನೀಡಿ ಹರಿಯಪ್ಪ ಕೆರೆ ,ಕಡಂಬಗುತ್ತು ಕೆರೆ ಅಭಿವೃದ್ಧಿಗೆ ಅಂದಾಜು ಪಟ್ಟಿ ನೀಡುವಂತೆ ಸೂಚಿಸಿದರು.