Advertisement
ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು, ಚೆಕ್‌ಡ್ಯಾಂಗಳನ್ನು ನಿರ್ಮಿಸಲು ಮತ್ತು ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಧನ ನೀಡಲು ಜಲಾನಯನ ಇಲಾಖೆಯಿಂದ 14 ಕೋಟಿ ರೂ. ಅನುದಾನ ಮಂಜೂರಾಗಿದೆ. ಕಾಮಗಾರಿ ಕೆಲಸಗಳು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದರು. ಹೊದಿಗೆರೆ ಗ್ರಾಮದಲ್ಲಿ 9066 ಜನ ಸಾಗುವಳಿ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಅದಷ್ಟು ಶೀಘ್ರದಲ್ಲಿಯೇ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಅಕ್ರಮ-ಸಕ್ರಮ ಯೋಜನೆಯಲ್ಲಿ 65 ಜನ ಫಲಾನುಭವಿಗಳಿಗೆ 65 ಟಿಸಿಗಳನ್ನು ನೀಡಲಾಗಿದೆ. 840 ಜನ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿದ್ದು ಪ್ರತಿ ತಿಂಗಳು 7.98 ಲಕ್ಷ ರೂ. ನೇರವಾಗಿ ಇವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಸಣ್ಣ ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಲ್ಲಿ 550 ಜನ ರೈತರಿಗೆ 1.25 ಕೋಟಿ ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.
Advertisement
ಅಂತರ್ಜಲ ಹೆಚ್ಚಳಕ್ಕೆ ಪ್ರಯತ್ನ : ಮಾಡಾಳ್
11:00 AM Mar 20, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.