Advertisement

Viral Video: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು

11:55 AM Aug 10, 2024 | Team Udayavani |

ಬೆಳಗಾವಿ: ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

Advertisement

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅಮಾನತ್ ಶಿಕ್ಷೆಗೆ ಒಳಗಾದ ಸಿಬ್ಬಂದಿಗಳು.

ಅಂಗನವಾಡಿ ಕಾರ್ಯಕರ್ತರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿ ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ.

ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್ ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದ ಮೊಟ್ಟೆ ಕಸಿದುಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

Advertisement

ವಿಡೀಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ವಜಾಮಾಡಲು ಮಾಡಲು ಸೂಚಿಸಿದ್ದೇನೆ ಎಂದು ಸಚಿವರ ಹೇಳಿಕೆ.

ಇದಲ್ಲದೆ ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸಚಿವರು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next