Advertisement

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

01:26 AM Dec 26, 2024 | Team Udayavani |

ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲಿನ ಮೊಟ್ಟೆ ಅಟ್ಯಾಕ್‌ ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ ಎಂದು ಕಾಂಗ್ರೆಸ್‌ ನಾಯಕಿ ಕುಸುಮಾ ಹನುಮಂತರಾಯಪ್ಪ ತಿರುಗೇಟು ನೀಡಿದ್ದಾರೆ.

Advertisement

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ದಲಿತರನ್ನು ತುಚ್ಛವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ ಎಫ್ಎಸ್‌ಎಲ್‌ ರಿಪೋರ್ಟ್‌ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ  ತರಹೇವಾರಿ ನಾಟಕಗಳು ಶುರುವಾಗಿದೆ ಎಂದು ಆರೋಪಿಸಿದ್ದಾರೆ.

ಜನರೆದುರು ತನ್ನ ನಿಜರೂಪ ಬೆತ್ತಲಾದ ಅನಂತರ ಸಿಂಪತಿ ಗಿಟ್ಟಿಸಿಕೊಳ್ಳಲು ಇಮೇಜ್‌ ಬಿಲ್ಡಿಂಗ್‌ ಆ್ಯಕ್ಟಿವಿಟಿಯ ಒಂದು ಭಾಗವೇ ಇಂದಿನ ಪ್ರಹಸನಗಳು. ಈತನ ಸ್ಕ್ರಿಪ್ಟೆಡ್‌ ಸ್ಟೋರಿಗಳು ಅಲ್ಪ ವಿರಾಮದ ಬಳಿಕ ಮತ್ತೆ ಚಾಲ್ತಿಗೆ ಬಂದಿವೆ. ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆಯೇ ಕಡಿಮೆ. ಇಂತಹ ಸನ್ನಿವೇಶದಲ್ಲಿ ಸ್ವತ್ಛ ರಾಜಕಾರಣದ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಕನಸುಗಳಿಗೆ ಬೆಲೆಯಿಲ್ಲವೆನಿಸುತ್ತದೆ. ಈ ನಾಟಕಗಳನ್ನು ಗಮನಿಸಿದರೆ ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜತೆ ಹಂದಿಗಳಾಗಿಯೇ ಇರಬೇಕಾ ಎಂಬ ಪ್ರಶ್ನೆಯ ಜತೆ ಅಸಹ್ಯ ಮೂಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next