Advertisement
ದ.ಕ., ಉಡುಪಿ ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತಾº, ಈದ್ ಸಂದೇಶ, ಪ್ರವಚನ ನಡೆದವು.
Related Articles
Advertisement
ಉಡುಪಿಯಲ್ಲಿ ಆಚರಣೆಉಡುಪಿಯ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ, ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ನೇತೃತ್ವದಲ್ಲಿ, ಕುಂದಾಪುರ ಜುಮಾ ಮಸೀದಿಯಲ್ಲಿ ಕುಂದಾಪುರದ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ, ಗಂಗೊಳ್ಳಿಯ ಜುಮಾ ಮಸೀದಿಯಲ್ಲಿ ಮೌಲಾನ ಮಝಮ್ಮಿಲ್ ನದ್ವಿ, ಮೊಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಉಳಿದಂತೆ ಉಭಯ ಜಿಲ್ಲೆಗಳ ಎಲ್ಲ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನದ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನದ ಮೂಲಕ ಹಬ್ಬದ ಶುಭಾಶಯ ವಿನಿಮಯ, ಮನೆಗಳಲ್ಲಿ ವಿಶೇಷ ಹಬ್ಬದೂಟದ ಜತೆಗೆ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ಇತ್ಯಾದಿ ನಡೆದವು.