Advertisement

ರಷ್ಯಾ: ಪೆರ್ಮ್ ವಿಶ್ವವಿದ್ಯಾಲಯದಲ್ಲಿ ಏಕಾಏಕಿ ಗುಂಡಿನ ದಾಳಿ, ಎಂಟು ವಿದ್ಯಾರ್ಥಿಗಳು ಸಾವು

12:13 PM Sep 21, 2021 | Team Udayavani |

ಮಾಸ್ಕೋ: ರಷ್ಯಾದ ಪೆರ್ಮ್ ಸ್ಟೇಟ್ ಯೂನಿರ್ವಸಿಟಿಯ ಕಟ್ಟಡದೊಳಕ್ಕೆ ನುಗ್ಗಿ, ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ (ಸೆಪ್ಟೆಂಬರ್ 20) ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೇಘನ್ ಎಚ್.ಕೆ

ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಕೆಲವು ವಿದ್ಯಾರ್ಥಿಗಳು, ಶಿಕ್ಷಕರನ್ನು ಕ್ಲಾಸ್ ರೂಂನೊಳಗೆ ಬಂಧಿಯಾಗಿರುವುದಾಗಿ ವರದಿ ವಿವರಿಸಿದೆ. ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿಗಳು ಕಟ್ಟಡದ ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲಲ್ಲಿ ವೈರಲ್ ಆಗಿದೆ.

ರಷ್ಯಾ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಬಂದೂಕುಧಾರಿ ವ್ಯಕ್ತಿ ತನಗೆ ತಾನೇ ಗುಂಡುಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದೆ. ಗುಂಡಿನ ದಾಳಿ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಸಾವನ್ನಪ್ಪಿರುವರ ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ವರದಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next