Advertisement
ಈ ಬಂಧನದಿಂದಾಗಿ ಅಫಜಲಪುರದಲ್ಲಿ ಕೆಲವರು ಕಣ್ಮರೆಯಾಗಿದ್ದಾರೆ ಎಂದು ಗೊತ್ತಾಗಿದೆ.
Related Articles
Advertisement
ಹಗರಣದ ಪ್ರಮುಖ ಕಿಂಗ್‌ಪಿನ್ ಆರ್.ಡಿ. ಪಾಟೀಲ ಬ್ಲೂಟೂತ್ ಬಳಸಿ ಇವರನ್ನು ಪಾಸ್ ಮಾಡಿಸಿದ್ದ ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈಗಾಗಲೇ ಬಂಧನದಲ್ಲಿರುವ ಆರೋಪಿಗಳು ನೀಡಿದ ಮಾಹಿತಿ ಆಧರಿಸಿದ್ದ ಸಿಐಡಿ ಅಧಿಕಾರಿಗಳ ತಂಡ ಹಲವು ತಿಂಗಳುಗಳಿಂದ ಇವರ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು. ನಿಖರ ಮಾಹಿತಿ ಸಿಗುತ್ತಿದ್ದಂತೆಯೇ ಇವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತರಲ್ಲಿ ರವಿರಾಜ್, ಪೀರಪ್ಪ ಸಿದ್ನಾಳ ಹಾಗೂ ಶ್ರೀಶೈಲ ಹಚ್ಚಡ ಮೂವರೂ ಕಲಬುರಗಿಯ ಶರಣಬಸವೇಶ್ವರ ಕಲಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.
ಇದನ್ನೂ ಓದಿ:100 ರೂ. ಹಣ ಡ್ರಾ ಮಾಡಿದ ಕಾರ್ಮಿಕನಿಗೆ ಬಂದಿದ್ದು 2,700 ಕೋಟಿ ರೂ. ಎಸ್ ಎಮ್ ಎಸ್ !
ಸಿದ್ದುಗೌಡ ಪಾಟೀಲ ಶರಣಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ ಮತ್ತು ಸೋಮನಾಥ ಗೋದುತಾಯಿ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು. ಅದೇ ರೀತಿ ಭಗವಂತರಾಯ ಜೋಗೂರ ಹೊಸ ಆರ್‌ಟಿಒ ಕಚೇರಿ ಬಳಿಯ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ. ಮತ್ತೋರ್ವ ಆರೋಪಿ ವಿಜಯಕುಮಾರ್ ಗುಡೂರ ನಗರದ ಎಂ.ಎಸ್. ಇರಾನಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ಎಂದು ವಿಚಾರಣೆ ವೇಳೆ ಗೊತ್ತಾಗಿದೆ.
ಸಿಐಡಿ ಡಿವೈಎಸ್ಪಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ, ವೀರೇಂದ್ರಕುಮಾರ್ ಹಾಗೂ ಡಿಟೆಕ್ಟಿವ್ ವಿಭಾಗದ ಪಿಎಸ್‌ಐಗಳಾದ ಆನಂದ, ಯಶವಂತ ಹಾಗೂ ಶಿವಪ್ರಸಾದ್ ನೆಲ್ಲೂರ ಅವರನ್ನೊಳಗೊಂಡ ತಂಡವು ಅಭ್ಯರ್ಥಿಗಳನ್ನು ಬಂಧಿಸಿ ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿರುವ ಸಿಐಡಿ ಕ್ಯಾಂಪ್ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದೆ.
ಅಭ್ಯರ್ಥಿಗಳಿಂದ ಆರ್.ಡಿ. ಪಾಟೀಲ ಹಾಗೂ ಸಹವರ್ತಿಗಳು ಎಷ್ಟು ಹಣ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.