Advertisement

‘ಏಕ್‌ ಲವ್‌ ಯಾ’ಜ.21ಕ್ಕೆ ರಿಲೀಸ್‌

09:05 AM Oct 17, 2021 | Team Udayavani |

ಪ್ರೇಮ್‌ ನಿರ್ದೇಶನದ “ಏಕ್‌ಲವ್‌ಯಾ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. ಚಿತ್ರ ಮುಂದಿನ ವರ್ಷ ಜನವರಿ 21ಕ್ಕೆ ತೆರೆಕಾಣಲಿದೆ.

Advertisement

ಪ್ರೇಮ್‌ ನಿರ್ದೇಶನದ “ಏಕ್‌ ಲವ್‌ ಯಾ’ ಚಿತ್ರ ನಾಲ್ಕು ಭಾಷೆಯಲ್ಲಿ ತಯಾರಾಗುತ್ತಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಚಿತ್ರ ತಯಾರಾಗುತ್ತಿದ್ದು, ಚಿತ್ರದ ಹಾಡನ್ನು ಕೂಡಾ ಆಯಾಯ ಭಾಷೆಯಲ್ಲಿ ಬಿಡುಗಡೆ ಮಾಡಿದ್ದಾರೆ.

ಇನ್ನು “ಏಕ್‌ ಲವ್‌ ಯಾ’ ಚಿತ್ರದಲ್ಲಿ ನಟಿ ರಕ್ಷಿತಾ ಸೋದರ ರಾಣಾ ನಾಯಕ ನಟನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದು, ಚಿತ್ರದಲ್ಲಿ ರಚಿತಾ ರಾಮ್‌ ಮತ್ತು ರೀಷಾ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರದ ಬಳಿಕ ಪ್ರೇಮ್‌, ಧ್ರುವ ಸರ್ಜಾ ನಾಯಕರಾಗಿರುವ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next