ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿರುವ ಏಕ್ ಲವ್ ಯಾ ಸಿನಿಮಾ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ರಾಣ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿದ್ದು, ರಚಿತಾ ರಾಮ್ ಕೂಡ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡಿವೆ.
ಇನ್ನು ಕಳೆದ ಕೆಲ ದಿನಗಳ ಹಿಂದೆ ನಿರ್ದೇಶಕ ಪ್ರೇಮ್ ಟೀಮ್ ಆಯುಧ ಪೂಜೆ ದಿವಸ ಒಂದು ಪ್ರಮುಖ ಅಪ್ ಡೇಟ್ ಕೊಡ್ತೀವಿ ಅಂತ ಹೇಳಿತ್ತು. ಅದರಂತೆ ನಿನ್ನೆ ಚಿತ್ರ ತಂಡ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.
ಕಳೆದ ಎರಡು ತಿಂಗಳ ಹಿಂದೆಯೇ ಚಿತ್ರತಂಡ ಚಿತ್ರದ ಶೂಟಿಂಗ್ ಕಂಪ್ಲೀಟ್ ಮಾಡಿ ಮುತ್ತತ್ತಿಯ ಆಂಜನೇಯ ದೇವಸ್ಥಾನದಲ್ಲಿ ಕುಂಬಳಕಾಯಿ ಹೊಡೆದಿತ್ತು. ಇದೀಗ ದಸರಾ ವೇಳೆ ಒಂದೊಳ್ಳೆ ಮಾಹಿತಿ ನೀಡಿರುವ ಪ್ರೇಮ್, ಮುಂದಿನ ವರ್ಷ ಅಂದ್ರೆ 2022 ರ ಜನವರಿ 21ಕ್ಕೆ ಸಿನಿಮಾ ತೆರೆಗೆ ಬರಲಿದೆ ಎಂದು ಹೇಳಿದೆ.
‘ಏಕ್ ಲವ್ ಯಾ’ ಚಿತ್ರಕ್ಕೆ ನಟಿ ರಕ್ಷಿತ ಬಂಡವಾಳ ಹಾಕಿದ್ದು, ಸಹೋದರ ರಾಣ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.