Advertisement

Ekagrid VV: ರಾಜ್ಯದಲ್ಲಿ ಕ್ಯಾಂಪಸ್‌ ತೆರೆಯಲು ಎಕಾಗ್ರಿಡ್‌ ವಿ.ವಿ. ಒಲವು

12:15 AM Oct 05, 2023 | Team Udayavani |

ಬೆಂಗಳೂರು: ಸಂಶೋಧನೆ ಆಧಾರಿತವಾಗಿರುವ ಅಮೆರಿಕಾದ ಎಕಾಗ್ರಿಡ್‌ ವಿಶ್ವವಿದ್ಯಾಲಯವು ಬೆಂಗಳೂರು ಅಥವಾ ಮೈಸೂರಿನಲ್ಲಿ ತನ್ನ ಕ್ಯಾಂಪಸ್‌ ತೆರೆಯಲು ಆಸಕ್ತಿ ತೋರಿದ್ದು ರಾಜ್ಯ ಸರಕಾರದಿಂದ 200 ಎಕರೆ ಭೂಮಿ ಕೇಳಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

Advertisement

ಮಂಗಳವಾರ ಈ ಸಂಬಂಧ ವಿಶ್ವವಿದ್ಯಾನಿಲಯದ ಪ್ರತಿನಿಧಿಗಳಾದ ಪೊ›| ಕೃಷ್ಣ ಸಾರಸ್ವತ್‌ ಮತ್ತು ಸಿಒಒ ಶೈಲೇಂದ್ರ ಕುಮಾರ್‌ ಅವರೊಂದಿಗೆ ಸುದೀರ್ಘ‌ ವಿಚಾರ ವಿನಿಮಯ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

2018ರಲ್ಲಿ ಭಾರತದಲ್ಲೇ ಕಾರ್ಯಾರಂಭ ಮಾಡಿರುವ ಎಕಾಗ್ರಿಡ್‌ ವಿಶ್ವವಿದ್ಯಾನಿಲಯವು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆ ಕೈಗೊಳ್ಳುವ ಗುರಿ ಹೊಂದಿದೆ. ವಿ.ವಿ.ಯು ಸ್ನಾತಕೋತ್ತರ ಕೋರ್ಸ್‌ಗಳನ್ನು ಆರಂಭಿಸಲು ಉದ್ದೇಶಿಸಿದೆ. ಜತೆಗೆ ದೇಶದಲ್ಲಿ ಅದು ಅಗ್ರಶ್ರೇಣಿಯ ಮೊದಲ 25 ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದೆ. ಕರ್ನಾಟಕದಲ್ಲಿ ಇರುವ ಉನ್ನತ ಶಿಕ್ಷಣ ಕಾರ್ಯ ಪರಿಸರದಲ್ಲಿರುವ ಅತ್ಯುತ್ತಮ ನೀತಿಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಅವರು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next