ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಯಲ್ಲಿ ಮಹಾಯುತಿಯ ಅಮೋಘ ವಿಜಯದ ಬಳಿಕ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲದ ನಡುವೆ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಂಗಳವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಶಿವಸೇನೆ ಮುಖ್ಯಸ್ಥ ಶಿಂದೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು ಇದಾದ ಬಳಿಕ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶೆ ಎದ್ದಿತ್ತು ಇದರ ನಡುವೆ ದೇವೇಂದ್ರ ಫಡ್ನವಿಸ್ ಅವರ ಹೆಸರೂ ಮುಂಚೂಣಿಯಲ್ಲಿದ್ದು ಮೈತ್ರಿಕೂಟದಲ್ಲೂ ಇದಕ್ಕೆ ಸಹಮತವಿತ್ತು ಎನ್ನಲಾಗಿದೆ ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿ ಎನ್ನಲಾಗಿತ್ತು.
ಒಂದು ವೇಳೆ ಫಡ್ನವಿಸ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರೆ ಏಕನಾಥ್ ಶಿಂದೆ ಹಾಗೂ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನ ಸ್ವೀಕರಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಇದನ್ನೂ ಓದಿ: Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ