Advertisement

Bengaluru; ವಿಮಾನ ಪ್ರಯಾಣದ ವೇಳೆ ಮಹಿಳೆಗೆ ಕಿರುಕುಳ: ವ್ಯಕ್ತಿ ಬಂಧನ

05:54 PM Nov 08, 2023 | Team Udayavani |

ಬೆಂಗಳೂರು : ಜರ್ಮನಿಯ ಫ್ರಾಂಕ್‌ಫರ್ಟ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

Advertisement

ನವೆಂಬರ್ 6 ರಂದು ಈ ಘಟನೆ ನಡೆದಿದ್ದು, ಆಂಧ್ರಪ್ರದೇಶದ ತಿರುಪತಿ ಮೂಲದ 32 ವರ್ಷದ ಮಹಿಳೆ ಮಲಗಿದ್ದಾಗ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ನಂತರ ಮಹಿಳೆ ಫ್ಲೈಟ್ ಅಟೆಂಡೆಂಟ್‌ಗೆ ವಿನಂತಿಸಿ ಸೀಟನ್ನು ಬದಲಾಯಿಸಿದ್ದಾರೆ. ಆ ಬಳಿಕವೂ ಆ ವ್ಯಕ್ತಿ ಕಿರುಕುಳ ನೀಡುವುದನ್ನು ಮುಂದುವರೆಸಿದ್ದಾನೆ. ವಿಮಾನ ಬೆಂಗಳೂರಿನಲ್ಲಿ ಇಳಿದ ನಂತರ ಮಹಿಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next