ಪಣಜಿ: ಗೋವಾದಲ್ಲಿ ಶೀಘ್ರದಲ್ಲಿಯೇ ವಿದ್ಯುತ್ ದರವನ್ನು ಏರಿಕೆ ಮಾಡಲಾಗುವುದು. ಮುಂದಿನ 8 ದಿನಗಳಲ್ಲಿ ವಿದ್ಯುತ್ ದರ ಹೆಚ್ಚಳದ ಕುರಿತು ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಸುದೀನ ಧವಳೀಕರ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತಾಡಿದ ಅವರು- ಪ್ರತಿ ಯೂನಿಟ್ ವಿದ್ಯುತ್‍ಗೆ 5 ರಿಂದ 10 ಪೈಸೆ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಗೋವಾದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಗಾಳಿ ಮಳೆಯಿಂದಾಗಿ ರಾಜ್ಯದ ಹಲವೆಡೆ ವಿದ್ಯುತ್ ಪೂರೈಕೆಗೆ ತೀವ್ರ ಹಾನಿಯಾಗಿದೆ. ಕೆಲವೆಡೆ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಹೆಚ್ಚಿನ ಹಾನಿಯಾಗಿದೆ.
ಇವುಗಳ ದುರಸ್ತಿಗಾಗಿ ಗೋವಾ ವಿದ್ಯುತ್ ಇಲಾಖೆ 10 ಕೋಟಿ ರೂ ಮೌಲ್ಯದ ವಿವಿಧ ಸಾಮಗ್ರಿಗಳನ್ನು ತರಿಸಿಕೊಳ್ಳಲಾಗುತ್ತಿದೆ ಎಂದು ಸಚಿವ ಸುದೀನ ಧವಳೀಕರ್ ಮಾಹಿತಿ ನೀಡಿದರು.
ಇದನ್ನೂ ಓದಿ : ಇದೇ ನಿಜವಾದ ಟೆಸ್ಲಾ!:ಎಲೆನ್ ಮಸ್ಕ್ ಜತೆ ಫೋಟೋ ಹಂಚಿಕೊಂಡ ಆನಂದ್ ಮಹೀಂದ್ರಾ