Advertisement

Election 2023: ಶಾಸಕರ ಫೋಟೋ ವೈರಲ್‌: ಕೇಸ್‌ ದಾಖಲು

12:32 AM Apr 07, 2023 | Team Udayavani |

ಬೆಂಗಳೂರು/ಪುತ್ತೂರು: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೋಟೋಗಳನ್ನು ವಿವಾಹಿತ ಮಹಿಳೆಯೋರ್ವರ ಜತೆ ಜೋಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ಆಪ್ತ ಕಾರ್ಯದರ್ಶಿ ಹಾಗೂ ಮಹಿಳೆಯೊಬ್ಬರು ಪೊಲೀಸರಿಗೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

Advertisement

ಶಾಸಕರ ಗೌರವಕ್ಕೆ ಚ್ಯುತಿ ತಂದಿರುವಂಥ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಶಾಸಕರ ಆಪ್ತ ಕಾರ್ಯದರ್ಶಿ ಎಸ್‌. ವಸಂತ ಕೇಂದ್ರ ವಿಭಾಗದ ಸೆನ್‌(ಸೈಬರ್‌) ಠಾಣೆಯಲ್ಲಿ ದೂರು ನೀಡಿದ್ದಾರೆ.

ಶಾಸಕ ಸಂಜೀವ ಮಠಂದೂರು ಮತ್ತು ಮಹಿಳೆಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯ ಬಿಡ ಲಾಗಿದೆ. ಈ ಬೆಳವಣಿಗೆಯಿಂದ ಶಾಸಕರ ಗೌರವಕ್ಕೆ ಚ್ಯುತಿ ಬಂದಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಉಪ್ಪಿನಂಗಡಿಯಲ್ಲೂ ದೂರು
ಇದೇ ಸಂದರ್ಭದಲ್ಲಿ ಆ ಹರಿಯ ಬಿಟ್ಟಿರುವ ಫೋಟೋದಲ್ಲಿ ಇದ್ದರೆನ್ನಲಾದ ಮಹಿಳೆಯು ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದು, “ಯಾರೋ ಕಿಡಿಗೇಡಿಗಳು ನನ್ನ ಫೋಟೋವನ್ನು ಅಸಹ್ಯಕರವಾಗಿ ರಾಜಕಾರಣಿ ಜತೆಗೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಇದರಿಂದ ನನ್ನ ಘನತೆಗೆ ಕುಂದುಂಟಾಗಿದ್ದು, ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬಿಜೆಪಿಗೆ ಮುಜುಗರ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ತವರು ಕ್ಷೇತ್ರದಲ್ಲೇ ನಡೆದ ಈ ವಿದ್ಯಮಾನದಿಂದ ಬಿಜೆಪಿ ತೀವ್ರ ಮುಜುಗರ ಉಂಟಾಗಿದೆ ಎನ್ನಲಾಗುತ್ತಿದೆ. ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನ ದಿನಾಚರಣೆಗೂ ಶಾಸಕರಿಗೆ ಆಹ್ವಾನ ನೀಡದೆ ಈ ವಿವಾದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎನ್ನುವ ಹಾಗೆ ಬಿಜೆಪಿ ಅಂತರ ಕಾಯ್ದುಕೊಂಡಿದೆ ಎನ್ನಲಾಗಿದೆ. ಸಂಜೀವ ಮಠಂದೂರು ಪ್ರಸ್ತುತ ಪುತ್ತೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next