Advertisement
ಪ್ರಸಕ್ತ ವಾರದ ಆರಂಭದಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎನ್‌ಸಿಪಿ ನಾಯಕ ಶರದ್ ಪವಾರ್, ಬಿಹಾರ ಸಿಎಂ ನಿತೀಶ್ ಕುಮಾರ್, ಡಿಸಿಎಂ ತೇಜಸ್ವಿ ಯಾದವ್, ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಲಲ್ಲನ್ ಸಹಿತ ವಿಪಕ್ಷಗಳ ಹಲವು ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದರು. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುವ ಶಪಥವನ್ನೂ ಮಾಡಿದ್ದರು.ಆದರೆ ಅನಂತರದ 3-4 ದಿನಗಳಲ್ಲಿ ಉಂಟಾಗಿರುವ ಬೆಳವಣಿಗೆಗಳು ಇದಕ್ಕೆ ತದ್ವಿರುದ್ಧ ಸಂದೇಶವನ್ನೇ ನೀಡುತ್ತಿವೆ.
Related Articles
ರಾಷ್ಟ್ರ ರಾಜಕಾರಣದಲ್ಲಿ ವಿಪಕ್ಷಗಳ ಒಗ್ಗಟ್ಟು ಸುದ್ದಿಯಾಗುತ್ತಿರುವ ನಡುವೆಯೇ ಎನ್‌ಸಿಪಿ ಹೋಳಾಗುವ ಸುದ್ದಿಯೂ ಚಾಲ್ತಿಗೆ ಬಂದಿದೆ. ಪಕ್ಷದ ನಾಯಕ ಅಜಿತ್ ಪವಾರ್ ಅವರು ಪಕ್ಷ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಗುಸು ಗುಸು ಆರಂಭವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಶಿವಸೇನೆ ಸಂಸದ ಸಂಜಯ್ ರಾವತ್ ಅವರೂ “ಶಿವಸೇನೆಯಂತೆಯೇ ಎನ್‌ಸಿಪಿ ಒಡೆಯುವ ಪ್ರಯೋಗವನ್ನು ಬಿಜೆಪಿ ಮಾಡುತ್ತಿದೆ’ ಎಂದಿದ್ದಾರೆ. ಇದೇ 22, 23ರಂದು ಅಜಿತ್ ಪವಾರ್ ಬಿಜೆಪಿಗೆ ಸೇರ್ಪಡೆಯಾಗಲು ಮುಹೂರ್ತ ಫಿಕ್ಸ್ ಆಗಿದೆ ಎಂದೂ ಮೂಲಗಳು ತಿಳಿಸಿವೆ. ಇದೇ ವೇಳೆ ಗುರುವಾರ ಉದ್ಧವ್-ಪವಾರ್ ಮಾತುಕತೆ ನಡೆಯುತ್ತಿರುವಾಗಲೇ ಅಜಿತ್ ಪವಾರ್ ಅವರು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.
Advertisement
ಕರ್ನಾಟಕದಲ್ಲಿ ಎನ್‌ಸಿಪಿ, ಸಿಪಿಐ ಸ್ಪರ್ಧೆಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಯಲ್ಲಿ 40-45 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎನ್‌ಸಿಪಿ ಚಿಂತನೆ ನಡೆಸಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಯು ತ್ರಿಕೋನ ಸ್ಪರ್ಧೆ ಇರುವಂಥ ಕ್ಷೇತ್ರಗಳಲ್ಲಿ ಎನ್‌ಸಿಪಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಸಿಪಿ ವರಿಷ್ಠರ ಆ ನಿರ್ಧಾರ ಮಿತ್ರಪಕ್ಷವಾದ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಶನಿವಾರವೇ ಪವಾರ್ ನಿವಾಸದಲ್ಲಿ ಸಭೆ ನಡೆಸಿ, ಕರ್ನಾಟಕದಲ್ಲಿ ಸ್ಪರ್ಧೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾವು ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ವಾಪಸ್ ಪಡೆಯಲು ಕೆಲವೊಂದು ಹೆಜ್ಜೆ ಇಡಬೇಕಾಗುತ್ತದೆ ಎಂದು ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಶುಕ್ರವಾರ ಹೇಳಿದ್ದಾರೆ. ಏತನ್ಮಧ್ಯೆ ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ಕಳೆದುಕೊಂಡ ಮತ್ತೂಂದು ಪಕ್ಷವಾದ ಸಿಪಿಐ ಕೂಡ ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಆಗ ದಲಿತ ಬಂಧು ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಲಿದ್ದೇವೆ. ನಮ್ಮ ಶತ್ರುಗಳಿಗೆ ಇದನ್ನು ಅರಗಿಸಿಕೊಳ್ಳಲು ಆಗಲಿಕ್ಕಿಲ್ಲ. ಆದರೆ ಜ್ವಾಲೆ ಹೊತ್ತಿ ಉರಿಯಲು ಒಂದು ಕಿಡಿ ಸಾಕು.
ಕೆ.ಚಂದ್ರಶೇಖರ್ ರಾವ್, ತೆಲಂಗಾಣ ಸಿಎಂ