Advertisement
ಅವರು ಮೂಡಿಗೆರೆಯಲ್ಲಿ ಬುಧವಾರ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ನನಗೆ ಇನ್ನು ಅಧಿಕಾರದ ಆಸೆ ಇಲ್ಲ. ಆದರೆ ದೇಶವಾಸಿಗಳು ನೆಮ್ಮದಿಯಿಂದ ಇರಬೇಕು ಎನ್ನುವ ನನ್ನ ಆಸೆಗೆ ಪ್ರಧಾನಿ ಆಗಲು ಸಾಮರ್ಥ್ಯ ಇರುವ ವ್ಯಕ್ತಿ ಮೋದಿ ಬಿಟ್ಟರೆ ಬೇರೆ ಯಾವುದೇ ವ್ಯಕ್ತಿ ಭಾರತದಲ್ಲಿಲ್ಲ.ಆ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ನಾನು ಮೋದಿಯವರನ್ನು ಬೆಂಬಲಿಸಿದೆ ಎಂದರು.
Related Articles
Advertisement
ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ವೈಎಸ್‌ವಿ ದತ್ತ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ತಾ| ಅಧ್ಯಕ್ಷ ಗಜೇಂದ್ರ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್, ತಾ| ಅಧ್ಯಕ್ಷ ಡಿ.ಜೆ. ಸುರೇಶ್, ಶೈಂಗೇರಿ ಸುಧಾಕರ ಶೆಟ್ಟಿ, ದೀಪಕ್ ದೊಡ್ಡಯ್ಯ, ಸುಶ್ಮಾವಿಭಾ, ಚೈತ್ರಶ್ರೀ, ಕಲ್ಮುರುಡಪ್ಪ, ಕುರುವಂಗಿ ವೆಂಕಟೇಶ್, ಜೆ.ಎಸ್. ರಘು ಉಪಸ್ಥಿತರಿದ್ದರು.
ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಿಕೋಟ ಶ್ರೀನಿವಾಸ ಪೂಜಾರಿ ಅವರ ಎದುರು ನಿಂತ ಕಾಂಗ್ರೆಸ್ ಅಭ್ಯರ್ಥಿ ನನ್ನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದವರು. ಆದರೆ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗೆ ಹೋಲಿಸಿದರೆ ಕೋಟ ಅವರ ವ್ಯಕ್ತಿತ್ವ ಬಹಳ ಎತ್ತರದಲ್ಲಿ ನಿಲ್ಲುತ್ತದೆ. ಇಂತಹ ರಾಜಕಾರಣಿಗಳು ಸಂಸತ್ ಪ್ರವೇಶ ಮಾಡಬೇಕಾದಂತಹ ಅಗತ್ಯವಿದೆ. ಕೋಟ ಅವರನ್ನು ಸಂಸತ್ತಿಗೆ ಕಳುಹಿಸಿ ಎಂಬ ಮೋದಿ ಮಾತಿಗೆ ನಾನು ಧ್ವನಿಗೂಡಿಸಿ ಕೋಟ ಅವರನ್ನು ಪ್ರಚಂಡ ಬಹುಮತ ದಿಂದ ಆಯ್ಕೆ ಮಾಡಬೇಕೆಂದು ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ಕರೆ ನೀಡಿದರು. ಸಿದ್ದರಾಮಯ್ಯ ಅವರು ದೇಶದ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಅಲ್ಲದೇ ಕೊನೆ ಹಂತದಲ್ಲಿ ದೇವೇಗೌಡರು ಬಿಜೆಪಿ ಹಿಂದೆ ಹೋಗಿದ್ದಾರೆಂದು ತನ್ನ ಬಗ್ಗೆ ಕೂಡ ಹಗುರವಾಗಿ ಮಾತನಾಡುತ್ತಾರೆ. ನನ್ನ ಮನಸ್ಸಿಗೆ ವಯಸ್ಸಾಗಿಲ್ಲ. ಇನ್ನೂ ಶಕ್ತಿ ಇದೆ. ಮುಖ್ಯಮಂತ್ರಿ ಆದವರಿಗೆ ಅಧಿಕಾರದ ಅಹಂ ಇರಬಾರದು. ಅದು ಇದ್ದರೆ ಆ ಪಕ್ಷ ಹೆಚ್ಚು ಕಾಲ ಉಳಿಯುವುದಿಲ್ಲ ಎಂದರು.