Advertisement

ಚುನಾವಣೆ ಹಿನ್ನೆಲೆ: ಚಳಿಗಾಲದ ಅಧಿವೇಶನ ಅನುಮಾನ

07:50 AM Nov 03, 2017 | |

ಹೊಸದಿಲ್ಲಿ: ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಹಾಲಿ ವರ್ಷ ಸಂಸತ್‌ನ ಚಳಿಗಾಲದ ಅಧಿವೇಶನ ನಡೆಯುವುದು ಅನುಮಾನ ಅಥವಾ ಹತ್ತು ದಿನಗಳ ಅಧಿವೇಶನ ನಡೆಸಲು ಚಿಂತನೆ ನಡೆಸುತ್ತಿದೆ.

Advertisement

ಈ ಬಗ್ಗೆ ಸಂಸದೀಯ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಶೀಘ್ರವೇ ಈ ನಿರ್ಧಾರ ಕೈಗೊಳ್ಳಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಸಾಮಾನ್ಯವಾಗಿ ಅಧಿವೇಶನ ನವೆಂಬರ್‌ ಕೊನೆಯ ವಾರದಿಂದ ಡಿಸೆಂಬರ್‌ ಮೂರನೇ ವಾರದ ವರೆಗೆ ನಡೆಯುತ್ತದೆ. ಹಾಲಿ ವರ್ಷ ಎರಡು ಪ್ರಮುಖ ರಾಜ್ಯಗಳ ಚುನಾವಣೆ ಇರುವುದರಿಂದ ಸರಕಾರ ಇಂಥ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next