ನಗರ ಪೊಲೀಸ್ ಆಯುಕ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಅಯುಕ್ತರು ಚುನಾವಣೆ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಮುಖ್ಯ ಪಾತ್ರ ವಹಿಸುವರು. ಈಗಾಗಲೇ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಕೆಲಸಗಳು ಪ್ರಾರಂಭವಾಗಿವೆ.
Advertisement
ಪೊಲೀಸ್ ಇಲಾಖೆಯೂ ಸಹ ಭದ್ರತೆಗೆ ಸಂಬಂಧಿಸಿದಂತೆ ನಿಗಾ ವಹಿಸಲಾರಂಭಿಸಿದೆ. ಜಿಲ್ಲೆಯಲ್ಲಿರುವ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡುತ್ತಿರುವ ಉನ್ನತ ಪೊಲೀಸ್ ಅಧಿಕಾರಿಗಳು, ಸ್ಥಳೀಯರೊಂದಿಗೆ, ಮೊಹಲ್ಲಾ, ಯುವ ಸಮಿತಿಗಳೊಂದಿಗೆ ಸಭೆ ನಡೆಸಿ, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
Related Articles
Advertisement
ರೌಡಿ ಶೀಟರ್‌ಗಳಿಗೆ ಎಚ್ಚರಿಕೆ
ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್, ಕ್ರಿಮಿನಲ್ ಹಿನ್ನೆಲೆ ಇರುವವರನ್ನು, ಸಾರ್ವಜನಿಕರಲ್ಲಿ ಭಯ ಮೂಡಿಸುವವರನ್ನು ಠಾಣೆಗಳಿಗೆ ಕರೆಸಿ, ಚುನಾವಣ ಸಂದರ್ಭದಲ್ಲಿ ಸಮಾಜದ ಶಾಂತಿ ಕದಡುವ ಕೆಲಸದಲ್ಲಿ ನಿರತರಾಗದಂತೆ ಎಚ್ಚರಿಕೆ ನೀಡಲಾಗುತ್ತಿದೆ.
ಚುನಾವಣ ಪೂರ್ವ ತಯಾರಿಯಾಗಿ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಎಲ್ಲ ಮತಗಟ್ಟೆಗಳ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸುತ್ತಿದೆ. ಅಂತಾರಾಜ್ಯ, ಅಂತರ್‌ಜಿಲ್ಲಾ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಮತಗಟ್ಟೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆ, ಸವಾಲುಗಳನ್ನು ಆಲಿಸಿ, ಪರಿಹರಿಸುವ ಕೆಲಸವೂ ನಡೆಯುತ್ತಿದೆ.-ಡಾ| ವಿಕ್ರಮ್ ಅಮಟೆ, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೂರ್ಣ ಪ್ರಮಾಣದಲ್ಲಿ ಸಿದ್ಧತೆ
ಸಿಬಂದಿ ಮತ್ತು ಅಧಿಕಾರಿಗಳಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದೆ. ಯಾವ ಕಾನೂನಿನಡಿಯಲ್ಲಿ ಏನು ಕ್ರಮ ಕೈಗೊಳ್ಳಬೇಕು, ಪ್ರಜಾಪ್ರತಿನಿಧಿ ಕಾಯಿದೆ, ಐಪಿಸಿ, ಬೇರೆ ಬೇರೆ ಸ್ಥಳೀಯ ಕಾನೂನುಗಳ ಬಗ್ಗೆಯೂ ತರಬೇತಿ ನೀಡಲಾಗಿದ್ದು, ಪೂರ್ಣ ಪ್ರಮಾಣದಲ್ಲಿ ಸಿದ್ಧತೆ ನಡೆದಿದೆ ಎನ್ನುತ್ತಾರೆ ಉನ್ನತ ಪೊಲೀಸ್ ಅಧಿಕಾರಿಗಳು. ಭದ್ರತೆಗೆ ಸಂಬಂಧಿಸಿದಂತೆ ಪ್ರತಿ ಕ್ಷಣವೂ ನಿಗಾ ವಹಿಸುವುದು ಪೊಲೀಸ್ ಇಲಾಖೆ ಜವಾಬ್ದಾರಿ. ಮುಂಬರುವ ವಿಧಾನ ಸಭಾ ಚುನಾವಣೆ ನ್ಯಾಯ ಸಮ್ಮತವಾಗಿ ನಡೆಸಲು ಸ್ಥಳೀಯ ಮತಗಟ್ಟಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಚಟು ವಟಿಕೆಗಳು ನಿರಂತವಾಗಿ ನಡೆಯುಲಿದೆ ಎನ್ನುತ್ತಾರೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್. ಭರತ್ ಶೆಟ್ಟಿಗಾರ್