Advertisement

Election Campaign; ಜಾತಿ ರಾಜಕಾರಣದಿಂದ ನನಗೆ ಟಿಕೆಟ್‌ ಕೈ ತಪ್ಪಿತು: ರಘುಪತಿ ಭಟ್‌

06:45 PM May 28, 2024 | Team Udayavani |

ಹೊನ್ನಾಳಿ: ಜಾತಿ ರಾಜಕೀಯದಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್‌ ತಪ್ಪಿಸಲಾಯಿತು ಎಂದು ಉಡುಪಿ ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್‌ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್‌ ಆರೋಪಿಸಿದರು.

Advertisement

ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ನಾನು ಈಗಾಗಲೇ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಿದ್ದೇನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಪ್ರಭಾರಿಯಾಗಿ ಪಕ್ಷದ ಅಭ್ಯರ್ಥಿ ಪರ ಸತತ 42 ದಿನ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ತಪ್ಪಿದ ಮೇಲೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಪಕ್ಷದ ನಾಯಕರು ಭರವಸೆ ನೀಡಿದ್ದರು.

ಈಗ ಟಿಕೆಟ್‌ ನೀಡದೆ ಕೈ ಕೊಟ್ಟಿದ್ದರಿಂದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಮತಯಾಚನೆ ಮಾಡುತ್ತಿದ್ದೇನೆ. ನನ್ನ ಗೆಲುವು ಗ್ಯಾರಂಟಿ. ನಾನು ಗೆದ್ದ ಮೇಲೆ ಪುನಃ ಬಿಜೆಪಿ ಸೇರುತ್ತೇನೆ. ಜನಸೇವೆಗಿಂತ ಮಿಗಿಲಾದ ಸೇವೆಯಿಲ್ಲ ಎಂದು ನಂಬಿರುವ ನಾನು, ಶಾಸಕನಾಗಿದ್ದ ಸಂದರ್ಭದಲ್ಲಿ ಬರಡು ಬಿದ್ದಿದ್ದ ಉಡುಪಿ ಕ್ಷೇತ್ರದ ಸಾವಿರಾರು ಎಕರೆ ಜಮೀನನ್ನು ಕೃಷಿ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೆ. ಇದರ ಫಲವಾಗಿ ಇಂದು ಭೂಮಿ ಹಸಿರಿನಿಂದ ಕಂಗೊಳಿಸುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next