Advertisement
ವಿಶೇಷವೆಂದರೆ, ಕಾಂಗ್ರೆಸ್‌ನ 125 ಅಭ್ಯರ್ಥಿಗಳ ಪೈಕಿ 50 ಮಂದಿ ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಅದರಲ್ಲೂ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರನ್ನು ಉನ್ನಾವ್ ಕ್ಷೇತ್ರದಿಂದಲೇ ಕಾಂಗ್ರೆಸ್ ಕಣಕ್ಕಿಳಿಸಿದೆ. ಆಶಾ ಕಾರ್ಯಕರ್ತೆಯರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಆಶಾ ಕಾರ್ಯಕರ್ತೆ ಪೂನಂ ಪಾಂಡೆ ಅವರಿಗೆ ಶಹಜಹಾನ್‌ಪುರದ ಟಿಕೆಟ್ ನೀಡಲಾಗಿದೆ. ಸಿಎಎ ವಿರೋಧಿ ಹೋರಾಟಗಾರ್ತಿ ಸದಾಫ್ ಜಫರ್, ಬುಡಕಟ್ಟು ನಾಯಕ ರಾಮ್‌ರಾಜ್ ಗೋಂಡ್ ಅವರೂ ಕಾಂಗ್ರೆಸ್‌ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ನಾಯಕಿ ಪ್ರಿಯಾಂಕಾ ವಾದ್ರಾ, “ಶೇ.40 ಅಭ್ಯರ್ಥಿಗಳು ಮಹಿಳೆಯರಾಗಿದ್ದರೆ, ಶೇ.40 ಅಭ್ಯರ್ಥಿಗಳು ಯುವಜನರಾಗಿದ್ದಾರೆ. ಉತ್ತರಪ್ರದೇಶದಲ್ಲಿ ನ್ಯಾಯಕ್ಕಾಗಿ ಹೋರಾಡಿದವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ’ ಎಂದು ಹೇಳಿದ್ದಾರೆ.
Related Articles
Advertisement
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ಆಪ್ ನಾಯಕ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ. ಇದಕ್ಕೆಂದೇ ಗುರುವಾರ ಮೊಬೈಲ್ ಸಂಖ್ಯೆಯೊಂದನ್ನು ಅನಾವರಣಗೊಳಿಸಿದ್ದು, ಜ.17ರೊಳಗೆ ಜನರು ಎಸ್ಸೆಮ್ಮೆಸ್ ಅಥವಾ ವಾಟ್ಸ್‌ಆ್ಯಪ್ ಸಂದೇಶದ ಮೂಲಕ ಸಿಎಂ ಅಭ್ಯರ್ಥಿ ಯಾರಾಗಬೇಕೆಂದು ತಮ್ಮ ಅಭಿಪ್ರಾಯವನ್ನು ಕಳುಹಿಸುವಂತೆ ಕೇಜ್ರಿವಾಲ್ ಸೂಚಿಸಿದ್ದಾರೆ. ಜನಾಭಿಪ್ರಾಯ ಬಂದ ಬಳಿಕ ಸಿಎಂ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದಿದ್ದಾರೆ. “ಭಗವಂತ್ ಮನ್ ನನ್ನ ಕಿರಿಯ ಸಹೋದರನಿದ್ದಂತೆ. ಅವರೇ ಸಿಎಂ ಆಗಬೇಕೆಂಬುದು ನನ್ನ ಆಸೆ. ಆದರೆ, ಜನರೇ ನಿರ್ಧರಿಸಲಿ ಎಂದು ಅವರು ಹೇಳಿದ್ದಾರೆ’ ಎಂದೂ ಕೇಜ್ರಿವಾಲ್ ನುಡಿದಿದ್ದಾರೆ.
ಎಸ್‌ಪಿ ನಾಯಕ ಅಖೀಲೇಶ್ ಯಾದವ್ ಅವರಿಗೆ ತಮ್ಮದೆಂದು ಹೇಳಿಕೊಳ್ಳಲು ಏನೂ ಇಲ್ಲ. ಹಾಗಾಗಿ, ಬೇರೆ ಪಕ್ಷಗಳ ನಾಯಕರನ್ನು ಸೆಳೆದುಕೊಂಡು ಶೋ ಮಾಡಲು ಹೊರಟಿ ದ್ದಾರೆ. ಆದರೆ, ಅವರ ಕನಸು ನನಸಾಗದು.-ಬೃಜೇಶ್ ಪಾಠಕ್, ಉ.ಪ್ರದೇಶ ಸಚಿವ
ಕಾಂಗ್ರೆಸ್ ನಾಯಕರು ಮೊದಲು ತಮ್ಮ ನಾಯಕರೇ “ದೇಶದ ದೊರೆಗಳು’ ಎಂದು ಭಾವಿಸುವುದನ್ನು ನಿಲ್ಲಿಸಬೇಕು. ಗೋವಾದಲ್ಲಿ ಕಾಂಗ್ರೆಸ್ ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದ್ದರೆ, ನಾವೀಗ ಅಲ್ಲಿಗೆ ಎಂಟ್ರಿಯಾಗುವ ಪರಿಸ್ಥಿತಿಯೇ ಬರುತ್ತಿರಲಿಲ್ಲ.-ಮೊಹುವಾ ಮೊಯಿತ್ರಾ, ಟಿಎಂಸಿ ಸಂಸದೆ