ಚಿಕ್ಕಬಳ್ಳಾಪುರ: ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವ ಚುನಾವಣಾ ಆಯೋಗವು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ತೀವ್ರ ಕುತೂಹಲ ಕೆರಳಿಸಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪವಿಭಾಗಧಿಕಾರಿ ಡಾ. ಸಂತೋಷ್ ಕುಮಾರ್ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು ಅದೇ ರೀತಿ ಆಯಾ ತಹಶೀಲ್ದಾರ್‍ಗಳನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಅದೇ ರೀತಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಿ ಶಿವಕುಮಾರ್ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಹಾಗೆಯೇ ಅಲ್ಲಿನ ತಹಶೀಲ್ದಾರ್ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನಿಯೋಜಿಸಲಾಗಿದೆ, ಗೌರಿಬಿದನೂರು ವಿಧಾನಸಭಾ ಕ್ಷೇತ್ರಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಹಾಗೂ ತಾಲೂಕಿನ ದಂಡಾಧಿಕಾರಿಗಳಿಗೆ ಸಹಾಯಕ ಚುನಾವಣಾಧಿಕಾರಿ ಆಗಿ ನೇಮಕ ಮಾಡಲಾಗಿದೆ.
ಅದೇ ರೀತಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಅದೇ ರೀತಿ ದಂಡಾಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನಿಯೋಜಿಸಲಾಗಿದೆ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರನ್ನು ನೇಮಕ ಮಾಡಲಾಗಿದೆ ತಹಶೀಲ್ದಾರ್ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ತಾಲೂಕು ದಂಡಾಧಿಕಾರಿಗಳನ್ನು ನೇಮಕ ಮಾಡಿ ಚುನಾವಣಾ ಆಯೋಗದ ಕಾರ್ಯದರ್ಶಿ ಮಧುಸೂದನ್ ಗುಪ್ತ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕುಣಿಗಲ್: ಮಾಜಿ ಶಾಸಕರ ಆಪ್ತ ಸಹಾಯಕನ ಅನುಮಾನಾಸ್ಪದ ಸಾವು