Advertisement

ಟ್ವೀಟ್ ವಿವಾದ; 2ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ; ಕಪಿಲ್ ಮಿಶ್ರಾಗೆ ಚುನಾವಣಾ ಆಯೋಗ

09:47 AM Jan 26, 2020 | Team Udayavani |

ನವದೆಹಲಿ: ದೆಹಲಿ ಚುನಾವಣೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಹೋರಾಟ ಎಂದು ಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದ ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾಗೆ ಚುನಾವಣಾ ಆಯೋಗ ಶನಿವಾರ 48ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ನಿಷೇಧ ಹೇರಿದೆ ಎಂದು ವರದಿ ತಿಳಿಸಿದೆ.

Advertisement

ಕೇಂದ್ರ ಮುಖ್ಯ ಚುನಾವಣಾಧಿಕಾರಿ ಶನಿವಾರ ಸಂಜೆ 5ಗಂಟೆಯಿಂದ ಈ ಆದೇಶ ಜಾರಿಯಾಗಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕಪಿಲ್ ಮಿಶ್ರಾ ಟ್ವೀಟ್ ಅನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಜ.24ರಂದು ಟ್ವೀಟರ್ ಸಂಸ್ಥೆಗೆ ಮನವಿ ಮಾಡಿಕೊಂಡಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳು ಕಪಿಲ್ ಮಿಶ್ರಾಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು.

ಟ್ವೀಟ್ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರು ಮೊಡೆಲ್ ಟೌನ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಫೆಬ್ರುವರಿ 8ರಂದು ದಿಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, 11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next