Advertisement
ರಾಜ್ಯದಲ್ಲಿ ಏಪ್ರಿಲ್ 18 ಹಾಗೂ 23ಕ್ಕೆ 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮಾ.10ರಿಂದಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಾದರಿ ನೀತಿ ಸಂಹಿತೆಯ ಅನುಷ್ಠಾನಕ್ಕೆ ಆದಾಯ ತೆರಿಗೆ, ಅಬಕಾರಿ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳನ್ನೊಳಗೊಂಡ ವಿವಿಧ ಇಲಾಖೆಗಳ ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದ್ದಾರೆ.
Related Articles
Advertisement
ಸಿಆರ್‌ಪಿಸಿ ಅಡಿಯಲ್ಲಿ 28,380 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು,16,462 ಮುಚ್ಚಳಿಕೆಗಳನ್ನು ಬರೆಸಿಕೊಳ್ಳಲಾಗಿದೆ. 6,378 ಜಾಮೀನು ತಹಿತ ವಾರಂಟ್‌ಗಳನ್ನು ಹೊರಡಿಸಲಾಗಿದ್ದು, ಚುನಾವಣೆ ಸಂದರ್ಭದಲ್ಲಿ ತೊಂದರೆ ಕೊಡಬಹುದು ಎಂಬಂಥ 34,679 ಮಂದಿಯನ್ನು ಗುರುತಿಸಲಾಗಿದ್ದು, ಆ ಪೈಕಿ 21 ಸಾವಿರ ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದರು.
ಹೊಸ ಯೋಜನೆ ಘೋಷಿಸುವಂತಿಲ್ಲ
ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಯಾರೇ ಆಗಲಿ ಸರ್ಕಾರದ ಪರವಾಗಿ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ, ನೀತಿ ನಿರೂಪಕ ವಿಚಾರಗಳ ಬಗ್ಗೆ ಭರವಸೆ ನೀಡುವಂತಿಲ್ಲ. ಯಾರಾದರೂ ಆ ರೀತಿ ಮಾಡಿದರೆ ಅದನ್ನು ಆಯೋಗ ಗಂಭೀರವಾಗಿ ಪರಿಗಣಿಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿ ವೇಳೆ “ಮಂಡ್ಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಜೂನ್ ತಿಂಗಳಲ್ಲಿ ಇಲ್ಲಿಗೆ ಬಂದು ಯೋಜನೆ ಉದ್ಘಾಟಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ’ ಇದು ನೀತಿಸಂಹಿತೆ ಉಲ್ಲಂಘ ನೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು.