Advertisement
ಮಾರ್ಚ್ 15 ರಂದು ಸಂಜೆ 5 ಗಂಟೆಯೊಳಗೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಬಿಐನಿಂದ ಸ್ವೀಕರಿಸಿದ ವಿವರಗಳನ್ನು ಪ್ರಕಟಿಸಲು ಚುನಾವಣ ಸಮಿತಿಗೆ ಸೂಚಿಸಲಾಗಿತ್ತು.
Related Articles
Advertisement
ವಿವರಗಳ ಮೊದಲ ಭಾಗದಲ್ಲಿ ಚುನಾವಣ ಬಾಂಡ್‌ಗಳನ್ನು ಖರೀದಿಸಿದ ಘಟಕಗಳನ್ನು ವಿವರಿಸುವ 337 ಪುಟಗಳನ್ನು ಒಳಗೊಂಡಿದೆ. 426 ಪುಟಗಳನ್ನು ಹೊಂದಿರುವ ಎರಡನೇ ಭಾಗವು ರಾಜಕೀಯ ಪಕ್ಷಗಳ ವಿವರಗಳನ್ನು ಒದಗಿಸಿದೆ.
ಚುನಾವಣ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಗ್ರಾಸಿಮ್ ಇಂಡಸ್ಟ್ರೀಸ್, ಮೇಘಾ ಇಂಜಿನಿಯರಿಂಗ್, ಟೊರೆಂಟ್ ಪವರ್, ಭಾರ್ತಿ ಏರ್‌ಟೆಲ್, ಡಿಎಲ್‌ಎಫ್ ಕಮರ್ಷಿಯಲ್ ಡೆವಲಪರ್ಸ್ ಮತ್ತು ವೇದಾಂತ ಲಿ.
ಚುನಾವಣ ಬಾಂಡ್‌ಗಳ ಖರೀದಿದಾರರಲ್ಲಿ ಅಪೊಲೊ ಟೈರ್ಸ್, ಲಕ್ಷ್ಮಿ ಮಿತ್ತಲ್, ಎಡೆಲ್‌ವೀಸ್, ಪಿವಿಆರ್, ಕೆವೆಂಟರ್, ಸುಲಾ ವೈನ್, ವೆಲ್‌ಸ್ಪನ್, ಸನ್ ಫಾರ್ಮಾ ಸೇರಿವೆ.
ಚುನಾವಣ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸಿರುವ ಪಕ್ಷಗಳಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ, ಬಿಆರ್‌ಎಸ್, ಶಿವಸೇನೆ, ಟಿಡಿಪಿ, ವೈಎಸ್‌ಆರ್ ಕಾಂಗ್ರೆಸ್, ಡಿಎಂಕೆ, ಜೆಡಿಎಸ್, ಎನ್‌ಸಿಪಿ, ತೃಣಮೂಲ ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎಎಪಿ, ಎಸ್‌ಪಿ ಸೇರಿವೆ.