Advertisement

ಚುನಾವಣಾ ಸಮಿತಿ ಸಭೆ ಇಂದು 

12:30 AM Feb 18, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆ ಸಿದ್ಧತೆ ಕುರಿತಂತೆ ಕಾಂಗ್ರೆಸ್‌ ಪಕ್ಷದಲ್ಲಿ ಇಂದು ಸರಣಿ ಸಭೆ ನಡೆಯಲಿವೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ರಾಜ್ಯ ಚುನಾವಣಾ ಸಮಿತಿ ಮೊದಲ ಸಭೆ ಸೋಮವಾರ ನಡೆಯಲಿದೆ.

Advertisement

ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ನಾಯಕರನ್ನೊಳಗೊಂಡ ಮೊದಲ ಸಭೆ ಇದಾಗಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕೆಲವು ನಿಯಮಗಳನ್ನು ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಅಲ್ಲದೇ ಅಭ್ಯರ್ಥಿಗಳ ಆಯ್ಕೆಗೆ ಆಕಾಂಕ್ಷಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಕ್ಷೇತ್ರವಾರು ವೀಕ್ಷಕರ ನೇಮಕ ಮಾಡುವ ಕುರಿತಂತೆ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೂ ಮೂವರು ವೀಕ್ಷಕರನ್ನು ನೇಮಿಸಿ ಅವರಿಂದ ಮಾಹಿತಿ ಸಂಗ್ರಹಿಸುವ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ. ಜಿಲ್ಲಾಧ್ಯಕ್ಷರ ಮೂಲಕವೂ ಪ್ರತ್ಯೇಕ ವರದಿ ಪಡೆಯುವ ಬಗ್ಗೆ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸುವ ಸಾಧ್ಯತೆ ಇದೆ.

ಅಲ್ಲದೇ, ಜೆಡಿಎಸ್‌ ಜತೆಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಕುರಿತು ಪಕ್ಷದ ನಿಲುವು ಏನಿರಬೇಕೆಂಬ ವಿಚಾರವನ್ನೂ ಚರ್ಚಿಸಿ, ಜೆಡಿಎಸ್‌ ಜತೆಗಿನ ಸಭೆಯಲ್ಲಿ ಗೊಂದಲಗಳು ನಿರ್ಮಾಣವಾಗದಂತೆ ನೋಡಿಕೊಳ್ಳಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ. ಮಾಜಿ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಸಮನ್ವಯ ಸಮಿತಿ ಸಭೆ ಕೂಡ ನಡೆಯಲಿದ್ದು, ಪಕ್ಷದ ನಾಯಕರಲ್ಲಿನ ಆಂತರಿಕ ಭಿನ್ನಾಭಿಪ್ರಾಯದಿಂದ ಪಕ್ಷದ ಮೇಲೆ ಆಗುತ್ತಿರುವ ವ್ಯತಿರಿಕ್ತ ಪರಿಣಾಮ ಹಾಗೂ ಅದರಿಂದ ಲೋಕಸಭೆ ಚುನಾವಣೆ ಮೇಲೆ ಬೀರುವ ಪರಿಣಾಮದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಮಾಸಾಂತ್ಯದಲ್ಲಿ ಹಾವೇರಿ, ವಿಜಯಪುರ ಹಾಗೂ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಸಮಾವೇಶಗಳ ಪೂರ್ವ ಸಿದಟಛಿತೆಗಳ ಕುರಿತಂತೆಯೂ ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಅಧ್ಯಕ್ಷತೆಯ ಚುನಾವಣಾ ಪ್ರಚಾರ ಸಮಿತಿ ಸಭೆ ನಡೆಯಲಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಚುನಾವಣಾ ಸಮಿತಿ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಚರ್ಚಿಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಯಾವ ಅಭ್ಯರ್ಥಿ ಕಣಕ್ಕಿಳಿಸಬೇಕು ಹಾಗೂ ಕ್ಷೇತ್ರಗಳ ಆಯ್ಕೆಕುರಿತು ಚರ್ಚೆ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next