ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನ ಸಭಾ ಚುನಾವಣೆಯ ದಿನಾಂಕ ಘೋಷಣೆಯನ್ನು ಚುನಾವಣಾ ಆಯೋಗ ಮಾಡಲಿದೆ ಎನ್ನಲಾಗಿದೆ.
ಅದರಂತೆ ಇಂದು (ಆಗಸ್ಟ್ 16) ರಂದು ಮಧ್ಯಾಹ್ನ ೩ ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು ಈ ವೇಳೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಜಮ್ಮು ಮತ್ತು ಕಾಶ್ಮೀರ ಸೇರಿ ಒಟ್ಟು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ರಾಜ್ಯಗಳ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಪತ್ರಿಕಾಗೋಷ್ಠಿ ನಡೆಸುವುದಾಗಿ ಚುನಾವಣಾ ಸಂಸ್ಥೆ ತಿಳಿಸಿದೆ.
ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂದಿನ 5 ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಯ ಅವಧಿಯು ನವೆಂಬರ್ 3 ಮತ್ತು ನವೆಂಬರ್ 26 ರಂದು ಮತ್ತು ಜಾರ್ಖಂಡ್‌ನ ಮುಂದಿನ ವರ್ಷ ಜನವರಿಯಲ್ಲಿ ಕೊನೆಗೊಳ್ಳಲಿದೆ.
ನಾಮಪತ್ರ ಸಲ್ಲಿಕೆ, ಮತದಾನದ ದಿನಗಳು ಮತ್ತು ಫಲಿತಾಂಶ ಘೋಷಣೆ ಸೇರಿದಂತೆ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ದಿನಾಂಕಗಳನ್ನು ಇಂದಿನ ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗಳು ವಿವರವಾಗಿ ತಿಳಿಸಲಿದ್ದಾರೆ.
ಇದನ್ನೂ ಓದಿ: Horoscope: ಅರ್ಹತೆಗೆ ಸರಿಯಾದ ಗೌರವದ ಸ್ಥಾನ, ಶುಭಸೂಚನೆಗಳೊಂದಿಗೆ ದಿನಾರಂಭ