Advertisement

ಚುನಾವಣಾ ವೆಚ್ಚ -ನಿಗಾ ವಹಿಸಲು ಸೂಚನೆ

01:13 PM Nov 23, 2019 | Suhan S |

ಬೆಳಗಾವಿ: ಗೋಕಾಕ ಮತಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಡಾ. ಸುಧಾಂಶು ರಾಯ್‌ ಶುಕ್ರವಾರ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಕೇಂದ್ರ(ಎಂಸಿಎಂಸಿ)ಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

Advertisement

ನಗರದ ವಾರ್ತಾ ಭವನದಲ್ಲಿ ಆರಂಭಿಸಲಾಗಿರುವ ಜಿಲ್ಲಾ ಮಟ್ಟದ ಮಾಧ್ಯಮ ಕಣ್ಗಾವಲು ಕೇಂದ್ರದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಚುನಾವಣಾ ವೆಚ್ಚದ ದೃಷ್ಟಿಯಿಂದ ನಿಗಾ ವಹಿಸುವಂತೆ ಸೂಚನೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಚುನಾವಣಾ ಪ್ರಚಾರದ ಮೇಲೆ ನಿಗಾವಹಿಸುತ್ತಿರುವ ಬಗ್ಗೆ ಪರಿಶೀಲಿಸಿದ ಅವರು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಪ್ರತಿಯೊಂದು ವರದಿಯನ್ನು ನಿಗದಿತ ಮಾದರಿಯಲ್ಲಿ ಪ್ರತಿದಿನ ತಮಗೆ ನೀಡಬೇಕು ಎಂದರು.

ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು.

ಇದಕ್ಕೂ ಮುನ್ನ ಮಾದರಿ ನೀತಿ ಸಂಹಿತೆ,ಸಿವಿಜಿಲ್‌, ದೂರು ನಿರ್ವಹಣಾ ಕೋಶ, ಅಬಕಾರಿ, ಪೊಲೀಸ್‌ ಸೇರಿದಂತೆ ವಿವಿಧ ತಂಡಗಳ ನೋಡಲ್‌ ಅಧಿಕಾರಿಗಳ ಸಭೆ ನಡೆಸಿದ ಅವರು, ಉಪ ಚುನಾವಣೆ ಅತ್ಯಂತ ಸೂಕ್ಷ್ಮವಾಗಿರುವುದರಿಂದ ಚುನಾವಣಾ ಖರ್ಚು-ವೆಚ್ಚಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ವೀಕ್ಷಕ ನೋಡಲ್‌ ಅಧಿಕಾರಿ ಈರಣ್ಣ ಚಂದರಗಿ, ಮಾದರಿ ನೀತಿ ಸಂಹಿತೆ ನೋಡಲ್‌ ಅಧಿಕಾರಿ ಜಗದೀಶ್‌ ರೂಗಿ, ಅಬಕಾರಿ ಉಪ ಆಯುಕ್ತರಾದ ಬಸವರಾಜ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next